ಯಲಬುರ್ಗಾ: ಗುಣಮಟ್ಟದ ಆಹಾರ ಕೊರತೆಯಿಂದ ಅಧಿಕ ಮಕ್ಕಳು ಮತ್ತು ಗರ್ಭಿಣಿಯರು ರಕ್ತ ಹೀನತೆಯಿಂದ ಬಳುಲುತ್ತಿದ್ದಾರೆ. ಉತ್ತಮ ಆಹಾರ ಸೇವಿಸಿದರೆ ಆರೋಗ್ಯವಾಗಿರಲು ಸಾಧ್ಯ ಎಂದು ಹಿರೇವಂಕಲಕುಂಟ ಗ್ರಾಪಂ ಉಪಾಧ್ಯಕ್ಷ ಮಂಜುನಾಥ ಹೇಳಿದರು.
ಇದನ್ನೂ ಓದಿ: Nirmala Sitharaman | ಭಾರತಕ್ಕೆ ಉತ್ತಮ ವಿರೋಧ ಪಕ್ಷದ ನಾಯಕರ ಅಗತ್ಯವಿದೆ ಎಂದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್!
ತಾಲೂಕಿನ ಗುರುವಾರ ಹಿರೇವಂಕಲಕುಂಟ ಗ್ರಾಮದಲ್ಲಿ 4ನೇ ಅಂಗನವಾಡಿಯಲ್ಲಿ ರಾಷ್ಟ್ರೀಯ ಪೋಷಣ ಮಾಸಾಚರಣೆ ಅಂಗವಾಗಿ ಹಮ್ಮಿಕೊಂಡ ಪೌಷ್ಟಿಕ ಆಹಾರ ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿದರು. ಆರೋಗ್ಯವಂತ ಮಕ್ಕಳಿಂದ ದೇಶ ಸದೃಢವಾಗುತ್ತದೆ. ಗರ್ಭಿಣಿಯರಿಗೆ ರಾಷ್ಟ್ರೀಯ ಪೋಷಣ ಅಭಿಯಾನ ಮೂಲಕ ಪೌಷ್ಟಿಕಾಂಶಭರಿತ ಆಹಾರ ನೀಡಲಾಗುತ್ತಿದೆ. ಇದನ್ನು ಪರಿಣಾಮಕಾರಿಯಾಗಿ ಅನುಷ್ಠಾಗೊಳಿಸಬೇಕು. ಮಹಿಳೆಯರು ಯಾವ ರೀತಿಯಲ್ಲಿ ಪೌಷ್ಟಿಕ ಆಹಾರ ಸೇವಿಸಬೇಕು. ಮಕ್ಕಳಿಗೆ ಪೌಷ್ಟಿಕ ಆಹಾರ ಹೇಗೆ ನೀಡಬೇಕು ಎಂಬುದರ ಕುರಿತು ತಿಳಿಸಿಕೊಡಬೇಕು ಎಂದರು.
ಅಂಗನವಾಡಿ ಮೇಲ್ವಿಚಾರಕಿ ಲಲಿತಾ ನಾಯ್ಕರ ಮಾತನಾಡಿ, ಗರ್ಭಿಣಿಯರಲ್ಲಿನ ರಕ್ತಹೀನತೆ ನಿವಾರಣೆ ಹಾಗೂ ಪೌಷ್ಟಿಕತೆ ಹೆಚ್ಚಿಸುವುದೇ ರಾಷ್ಟ್ರೀಯ ಪೋಷಣ್ ಅಭಿಯಾನದ ಪ್ರಮುಖ ಉದ್ದೇಶ. ದೇಶದಲ್ಲಿ ಹೆಚ್ಚುತ್ತಿರುವ ರಕ್ತಹೀನತೆ ಹೋಗಲಾಡಿಸಲು ಕೇಂದ್ರ, ರಾಜ್ಯ ಸರ್ಕಾರ ಸೆಪ್ಟೆಂಬರ್ ತಿಂಗಳಲ್ಲಿ ಪೋಷಣ ಅಭಿಯಾನ ಮಾಸಾಚರಣೆ ಕಾರ್ಯಕ್ರಮ ಹಮ್ಮಿಕೊಂಡಿದೆ.
ಈ ಯೋಜನೆ ಅಡಿ ಇರುವ ತಾಯಿ ಮತ್ತು ಮಗುವಿನ ಸಂಪೂರ್ಣ ಆರೈಕೆ ಮಾರ್ಗಸೂಚಿಗಳ ಬಗ್ಗೆ ಜನಸಾಮಾನ್ಯರಲ್ಲಿ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಅರಿವು ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಪೌಷ್ಠಿಕ ಆಹಾರ ಪಡೆದುಕೊಂಡು ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದರು. ಸಮುದಾಯ ಆರೋಗ್ಯ ಅಧಿಕಾರಿ ಜಯಶ್ರೀ, ಗ್ರಾಪಂ ಸದಸ್ಯ ಆನಂದ್ ಈಳಗೇರ, ಅಂಗನವಾಡಿ ಕಾರ್ಯಕರ್ತೆಯರಾದ ಲಕ್ಷ್ಮೀ ಚಿಣಗಿ, ಭಾರತಿ, ಶ್ರೀದೇವಿ ಬಡಿಗೇರ, ಗೀತಾ, ರೇಣುಕಾ ವಿಜಯಲಕ್ಷ್ಮೀ ಇದ್ದರು.