ಜಿಲ್ಲೆ

ಯೋಗಾಭ್ಯಾಸದಿಂದ ಆರೋಗ್ಯ ಸುಸ್ಥಿತಿ

ಪ್ರಸಿನ್ ಕೆ.ಆರ್

ಗೋಣಿಕೊಪ್ಪ: ಪೊನ್ನಂಪೇಟೆಯ ಕೊಡವ ಎಜುಕೇಷನ್ ಸೊಸೈಟಿಯ ಅಧೀನಕ್ಕೊಳಪಡುವ ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ಪ್ರಸಕ್ತ ವರ್ಷ ಪ್ರವೇಶಾತಿ ಪಡೆದ ಇಂಜಿನಿಯರಿಂಗ್ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಇಂಡೆಕ್ಷನ್ ಕಾರ್ಯಕ್ರಮ ಅಂಗವಾಗಿ ಯೋಗಾಭ್ಯಾಸದ ಮಹತ್ವ ತಿಳಿಸುವ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಮೈಸೂರಿನ ಯೋಗವಿಲ್ಲಾ ಸಂಸ್ಥೆಯ ಸಂಸ್ಥಾಪಕಿ ಅಮೃತ್ ರಾಕೇಶ್ ಪಾಲ್ಗೊಂಡು, ಮಾತನಾಡಿ, ಯೋಗ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಪೂರಕವಾಗಿದೆ. ಪ್ರತಿದಿನ ಯೋಗಾಭ್ಯಾಸ ಮಾಡುವುದರಿಂದ ಆರೋಗ್ಯವನ್ನು ಸಮಸ್ಥಿತಿಯಲ್ಲಿಟ್ಟುಕೊಳ್ಳಬಹುದು. ಯೋಗದಿಂದ ಮಾನಸಿಕ ಒತ್ತಡ ನಿವಾರಿಸಿಕೊಳ್ಳಬಹುದು ಎಂದರು.

ಸಿಐಟಿ ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಬಸವರಾಜು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ರಸಾಯನಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಐ.ಕೆ.ಯಮುನಾ, ಕಾವೇರಿ ಚೆಂಗಪ್ಪ ಇದ್ದರು.