ವಿಜಯಪುರ : ನಗರದ ಬಿಡಿಈ ಸಂಸ್ಥೆಯ ಬಾಲಕಿಯರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ರಾಜ್ಯಮಟ್ಟದ ಸೈಕ್ಲಿಂಗ್ ಸ್ಪರ್ಧೆಯಲ್ಲಿ ಉತ್ತಮ ಸಾಧನೆಗೈದಿದ್ದಾರೆ.
ಶಾಲಾ ಶಿಕ್ಷಣ ಇಲಾಖೆ (ಪ.ಪೂ), ಉಪ ನಿರ್ದೇಶಕರ ಕಾರ್ಯಾಲಯದ ಸಹಯೋಗದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಪ್ರಸಕ್ತ ಸಾಲಿನ ಸ್ಪರ್ಧೆಯಲ್ಲಿ ವಿದ್ಯಾರ್ಥಿನಿ ಛಾಯಾ ನಾಗಶೆಟ್ಟಿ ಮತ್ತು ದೀಪಿಕಾ ಪಡತಾರೆ ಚಿನ್ನದ ಪದಕ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಕೆ.ಬಿ. ಕುಲಕರ್ಣಿ, ಜಂಟಿ ಕಾರ್ಯದರ್ಶಿ ಆರ್.ಪಿ. ಚಿಕ್ಕಲಕಿ, ಪ್ರಾಚಾರ್ಯ ಪಿ.ಟಿ. ಕೊಟ್ನಿಸ್, ದೈಹಿಕ ಉಪನ್ಯಾಸಕ ಗಿರೀಶ ಕುಲಕರ್ಣಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.