ಜಿಲ್ಲೆ

ನಾಯಕತ್ವದ ಗುಣದಿಂದ ಉತ್ತಮ ವ್ಯಕ್ತಿತ್ವ : ಕಾನೂನು ಅರಿವು ಕಾರ್ಯಕ್ರಮದಲ್ಲಿ ಓಮನಾ ಹೇಳಿಕೆ

Avinash R

ಬಂಟ್ವಾಳ: ಸರ್ಕಾರಿ ಪದವಿಪೂರ್ವ ಕಾಲೇಜು ವಾಮದಪದವು ನೂತನ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಉದ್ಘಾಟನೆ ಹಾಗೂ ಪೋಕ್ಸೋ ಕಾಯಿದೆ ಹಾಗೂ ಬಾಲ್ಯ ವಿವಾಹ ನಿಷೇಧ ಕಾಯಿದೆ ಅರಿವು ಕಾರ್ಯಕ್ರಮ ನಡೆಯಿತು.

ಕಾಲೇಜು ವಿದ್ಯಾರ್ಥಿ ಸಂಘ ಪುಂಜಾಲಕಟ್ಟೆ ಆರಕ್ಷಕ ಠಾಣೆ ಪೊಲೀಸ್ ಉಪನಿರೀಕ್ಷಕಿ ಓಮನಾ ಉದ್ಘಾಟಿಸಿ ಪೋಕ್ಸೋ ಕಾಯಿದೆ, ಬಾಲ್ಯ ವಿವಾಹ ನಿಷೇಧ ಕಾಯಿದೆ, ಮಾದಕ ದ್ರವ್ಯಗಳ ದುಷ್ಪರಿಣಾಮ ಹಾಗೂ ಟ್ರಾಫಿಕ್ ನಿಯಮ ಕುರಿತು ಮಾಹಿತಿ ನೀಡಿ ವೈಯಕ್ತಿಕ ಜೀವನದಲ್ಲಿ ಶಿಸ್ತು ಹಾಗೂ ನಾಯಕತ್ವದ ಗುಣ ಅಳವಡಿಸಿಕೊಂಡು, ಉತ್ತಮ ವ್ಯಕ್ತಿತ್ವ ನಿರ್ಮಾಣ ಮಾಡಿಕೊಳ್ಳಬೇಕೆಂದು ತಿಳಿಸಿದರು.

ಪ್ರಾಂಶುಪಾಲ ಶ್ರೀಧರ ಎಚ್.ಜಿ.ವಿದ್ಯಾರ್ಥಿ ಸಂಘ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋಧಿಸಿದರು. ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಚಂದ್ರಶೇಖರ ಶೆಟ್ಟಿ ಅಧ್ಯಕ್ಷತೆ ವಹಿಸಿದರು.

ಇತಿಹಾಸ ಉಪನ್ಯಾಸಕ ಸುಧಾಕರ ಪ್ರಭು, ಪುಂಜಾಲಕಟ್ಟೆ ಆರಕ್ಷಕ ಠಾಣೆ ಸಹಾಯಕ ಉಪನಿರೀಕ್ಷಕ ತಾರನಾಥ ಹಾಗೂ ನಾರಾಯಣ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ನಾಗರಾಜ ಶೆಟ್ಟಿ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ, ಫೌಂಡೇಷನ್ ಅಧ್ಯಕ್ಷ ಹಂಝ ಬಸ್ತಿಕೋಡಿ ಪ್ರಮುಖರಾದ ಯಶೋಧರ ಶೆಟ್ಟಿ, ಕೆ.ಪಭಾಕರ ಶೆಟ್ಟಿ, ರಮೇಶ ಶೆಟ್ಟಿ ಉಪಸ್ಥಿತರಿದ್ದರು.

ಕಾಲೇಜು ವಿದ್ಯಾರ್ಥಿ ಸಂಘದ ನಾಯಕ ಪ್ರಣೀತ್ ಸ್ವಾಗತಿಸಿ, ಕಾರ್ಯದರ್ಶಿ ಶ್ರೀನಿಧಿ ಜೆ.ಶೆಟ್ಟಿ ವಂದಿಸಿ. ಆರೋಗ್ಯ ಹಾಗೂ ನೈರ್ಮಲ್ಯ ಕಾರ್ಯದರ್ಶಿ ತೇಜಸ್ವಿನಿ ನಿರೂಪಿಸಿದರು. ನಾಡಪ್ರಭು ಕೆಂಪೇಗೌಡ ದಿನಾಚರಣೆ ಪ್ರಯುಕ್ತ ನಡೆಸಲಾದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.