ಜಿಲ್ಲೆ

ಹೈನುಗಾರಿಕೆಯಿಂದ ಉತ್ತಮ ಲಾಭ: ರತ್ನ ಕುಮಾರ ಚೌಟ ಅಭಿಪ್ರಾಯ

ಬಂಟ್ವಾಳ: ದ.ಕ. ಜಿಲ್ಲಾ ಪಂಚಾಯಿತಿ ಮಂಗಳೂರು, ದ.ಕ. ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ, ಸಿದ್ದಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘ, ಸಿದ್ದಕಟ್ಟೆ ಸಹಕಾರಿ ವ್ಯವಸಾಯಿಕ ಬ್ಯಾಂಕ್, ಗ್ರಾಮ ಪಂಚಾಯಿತಿ ಕುಕ್ಕಿಪಾಡಿ, ಗ್ರಾಮ ಪಂಚಾಯಿತಿ ಸಂಗಬೆಟ್ಟು, ರೋಟರಿ ಕ್ಲಬ್ ಸಿದ್ದಕಟ್ಟೆ ಫಲ್ಗುಣಿ ಸಂಯುಕ್ತ ಆಶ್ರಯದಲ್ಲಿ ಜಾನುವಾರು ಜಾಗೃತಿ ಶಿಬಿರ ಸೋಮವಾರ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ನಡೆಯಿತು.

ಶಾಸಕ ರಾಜೇಶ್ ನಾಕ್ ಉಳಿಪ್ಪಾಡಿಗುತ್ತು ಗೋಪೂಜೆ ಮಾಡಿ ಚಾಲನೆ ನೀಡಿದರು. ಸಂಗಬೆಟ್ಟು ಗ್ರಾ.ಪಂ. ಅಧ್ಯಕ್ಷೆ ರಾಜೀವಿ ಕಾರ್ಯಕ್ರಮ ಉದ್ಘಾಟಿಸಿದರು. ಸಿದ್ದಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ರತ್ನ ಕುಮಾರ ಚೌಟ ಮಾತನಾಡಿ, ಯೋಗ್ಯ ರೀತಿಯಲ್ಲಿ ಹೈನುಗಾರಿಕೆ ನಡೆಸುವುದರಿಂದ ಉತ್ತಮ ಲಾಭ ಪಡೆಯಬಹುದು. ಇಂತಹ ಶಿಬಿರಗಳಿಂದ ಸರಿಯಾದ ಮಾರ್ಗದರ್ಶನ ಪಡೆದುಕೊಳ್ಳಬೇಕು ಎಂದರು.

ಸಿದ್ದಕಟ್ಟೆ ಪ್ರಾ.ಕೃ.ಸ.ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಮಾತನಾಡಿದರು. ಮಂಗಳೂರು ದ.ಕ. ಹಾಲು ಒಕ್ಕೂಟ ಉಪ ವ್ಯವಸ್ಥಾಪಕ ಡಾ.ಚಂದ್ರಶೇಖರ ಭಟ್ ಮಾಹಿತಿ ನೀಡಿದರು. ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕಿ ಸವಿತಾ ಎನ್.ಶೆಟ್ಟಿ, ರೋಟರಿ ಕ್ಲಬ್ ಸಿದ್ದಕಟ್ಟೆ ಫಲ್ಗುಣಿ ಅಧ್ಯಕ್ಷ ಶಿವಯ್ಯ ಎಲ್, ಅರಳ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಅಧ್ಯಕ್ಷೆ ರೂಪಾ ಜೆ.ಶೆಟ್ಟಿ, ಕುಕ್ಕಿಪಾಡಿ ಗ್ರಾ.ಪಂ. ಅಧ್ಯಕ್ಷ ಶೇಖರ ಶೆಟ್ಟಿ ಬದ್ಯಾರು, ರಾಯಿ ಹಾ.ಉ.ಸಂಘದ ಅಧ್ಯಕ್ಷ ದಿನೇಶ್ ಶೆಟ್ಟಿ ರಾಯಿ ಅತಿಥಿಗಳಾಗಿ ಭಾಗವಹಿಸಿದ್ದರು. ದ.ಕ. ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವೈದ್ಯಾಧಿಕಾರಿಗಳಾದ ಡಾ.ಕಾರ್ತಿಕ್, ಡಾ.ಭವಿತ್, ಡಾ.ನಿಖಿಲ್, ಡಾ.ಅಶೋಕ್, ಡಾ.ಮಾನಸ, ದ.ಕ. ಹಾಲು ಒಕ್ಕೂಟ ವಿಸ್ತರಣಾಧಿಕಾರಿ ಜಗದೀಶ್, ಸಿದ್ದಕಟ್ಟೆ ಹಾ.ಉ. ಸಂಘದ ಕಾರ್ಯದರ್ಶಿ ಪ್ರಭಾಕರ ನಾಯಕ್, ರಾಯಿ ಹಾ.ಉ. ಸಂಘದ ಕಾರ್ಯದರ್ಶಿ ಸದಾನಂದ ಗೌಡ, ವಾಮದಪದವು ಹಾ.ಉ. ಸಂಘದ ಕಾರ್ಯದರ್ಶಿ ನಾರಾಯಣ ಶೆಟ್ಟಿ, ಪಶುವೈದ್ಯಕೀಯ ಸೇವಾ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.

ಡಾ.ಅವಿನಾಶ್ ಭಟ್ ಸ್ವಾಗತಿಸಿ ಪ್ರಸ್ತಾವಿಸಿದರು. ಪಶು ವೈದ್ಯಾಧಿಕಾರಿ ಡಾ.ಉಮೇಶ್ ಕಿರಣ್ ವಂದಿಸಿದರು. ಶ್ರೀಧರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಹಾಲು ಕರೆಯುವ ಸ್ಪರ್ಧೆ ವಿಜೇತರಿಗೆ ಬಹುಮಾನ

ಇಲಾಖೆ ನಡೆಸಿದ್ದ ಹಾಲು ಕರೆಯುವ ಸ್ಪರ್ಧೆಯಲ್ಲಿ ವಿಜೇತರಾದ ನವೀನ್ ಶೆಟ್ಟಿ ವಾಮದಪದವು, ಭರತ್ ಕುಮಾರ್ ಬುಡೋಳಿ, ಜಾನ್ ರೊನಾಲ್ಡ್ ರೊಡ್ರಿಗಸ್ ರಾಯಿ ಅವರಿಗೆ ಪ್ರಶಸ್ತಿ ವಿತರಿಸಲಾಯಿತು.