ದಿಡಿಗ ಗ್ರಾಮದಲ್ಲಿ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಗುರುವಾರ ಶಾಸಕ ಬಾಲಕೃಷ್ಣ ಚಾಲನೆ ನೀಡಿದರು. 
ಜಿಲ್ಲೆ

ಉತ್ತಮ ರಸ್ತೆಯಿಂದ ಸುಗಮ ಸಂಚಾರಕ್ಕೆ ಅನುಕೂಲ

ಅಭಿನಯ್ ಎಚ್.ಎಂ

ಹಿರೀಸಾವೆ: ದಿಡಗದಿಂದ ಹಿರೀಸಾವೆವರೆಗೆ 1 ಕೋಟಿ ರೂ.ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಪಡಿಸಲಾಗುವುದು ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು.

ಹೋಬಳಿಯ ದಿಡಗ ಗ್ರಾಮದ ಡಾ.ರಾಜ್ ವೃತ್ತದಲ್ಲಿ ಪಿಡಬ್ಲ್ಯೂಡಿ ಇಲಾಖೆ ವತಿಯಿಂದ 1 ಕೋಟಿ ರೂ.ವೆಚ್ಚದಲ್ಲಿ ಆಯ್ದ ಭಾಗಗಳ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಬುಧವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಅಲ್ಲಲ್ಲಿ ಹಾಳಾಗಿರುವ ರಸ್ತೆ ಸರಿಪಡಿಸಿದರೆ ಸುಗಮ ಸಂಚಾರಕ್ಕೆ ಅನುಕೂಲವಾಗಲಿದೆ ಎಂದರು.

ದಿಡಗ ಗ್ರಾಮವು ತಾಲೂಕಿನ ಗಡಿಭಾಗದಲ್ಲಿದ್ದು, ಅಕ್ಕಪಕ್ಕದ ತಾಲೂಕುಗಳಾದ ತಿಪಟೂರು, ತುರುವೇಕೆರೆ, ನಾಗಮಂಗಲ ಸೇರಿದಂತೆ ವಿವಿಧ ನಗರಗಳಿಗೆ ಸಂಪರ್ಕ ಕಲ್ಪಿಸಲಿದೆ. ಎಲ್ಲ ಭಾಗಗಳಿಗೂ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗಿದೆ ಎಂದು ತಿಳಿಸಿದರು.

ದಿಡಗ ಗ್ರಾಮದ ಬಸ್ ನಿಲ್ದಾಣದ ಅಭಿವೃದ್ಧಿಗೆ ಯೋಜನೆ ರೂಪಿಸಿದು,್ದ ನೆಲಹಾಸಿನಲ್ಲಿ ಕಾಂಕ್ರೀಟ್, ನೆರಳು ಹಾಗೂ ಆಸನಗಳ ವ್ಯವಸ್ಥೆಯೊಂದಿಗೆ ಶೌಚಗೃಹ ನಿರ್ಮಾಣಕ್ಕೆ ಆದ್ಯತೆ ನೀಡಲಾಗುವುದು ಎಂದು ಭರವಸೆ ನೀಡಿದರು.

ತಾಲೂಕು ಪಂಚಾಯಿತಿ ಮಾಜಿ ಸದಸ್ಯರಾದ ಪುಟ್ಟರಾಜ್, ಎಂ.ಆರ್.ವಾಸು, ಗ್ರಾಮ ಪಂಚಾಯಿತಿ ಅಧ್ಯಕ್ಷ ದಿನೇಶ್ ಇತರರಿದ್ದರು.