ರಾಯಬಾಗದಲ್ಲಿ ಹಮ್ಮಿಕೊಂಡಿದ್ದ ಭರಮಾ ಅಣ್ಣಪ್ಪ ಚೌಗುಲೆ ಶಿಕ್ಷಣ ಸಂಸ್ಥೆಯ ಉತ್ಸವವನ್ನು ಗಣ್ಯರು ಉದ್ಘಾಟಿಸಿದರು. ಸಿದ್ದರಾಮ ಶಿವಯೋಗಿ ಸ್ವಾಮೀಜಿ, ವೀರಭದ್ರ ಸ್ವಾಮೀಜಿ, ವೀರಭದ್ರ ಸ್ವಾಮೀಜಿ ಇತರರಿದ್ದರು. 
ಜಿಲ್ಲೆ

ಉತ್ತಮ ಕೌಶಲಯುಕ್ತ ಬೋಧನೆ ಅಗತ್ಯ

ರಾಘವೇಂದ್ರಗೌಡ ಭೀ ಪಾಟೀಲ್

ರಾಯಬಾಗ: ಜ್ಞಾನ ಹಾಗೂ ಉತ್ತಮ ಕೌಶಲಗಳಿಂದ ಬೋಧನೆ ಮಾಡುವ ಮೂಲಕ ವಿದ್ಯಾರ್ಥಿಗಳ ಉಜ್ವಲ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಹಿರಿದಾಗಿದೆ ಎಂದು ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಸಿ.ಎಂ.ತ್ಯಾಗರಾಜ ಹೇಳಿದರು.

ಪಟ್ಟಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಭರಮಾ ಅಣ್ಣಪ್ಪ ಚೌಗುಲೆ ಶಿಕ್ಷಣ ಸಂಸ್ಥೆಯ ಉತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಬದುಕಿನಲ್ಲಿ ಉನ್ನತ ಗುರಿ ಹೊಂದಿ, ಅದರೆಡೆಗೆ ನಿರಂತರ ಪ್ರಯತ್ನ ಹಾಗೂ ಗುರುವಿನ ಮಾರ್ಗದರ್ಶನ ದೊರೆತಾಗ ಮಾತ್ರ ಯಶಸ್ಸು ನಿಶ್ಚಿತ ಎಂದರು.

ರನ್ನ ಬೆಳಗಲಿಯ ಸಿದ್ದರಾಮ ಶಿವಯೋಗಿ ಸ್ವಾಮೀಜಿ ಆಶೀರ್ವಚನ ನೀಡಿದರು. ನಂದಿಕುರಳಿ ಪಂಚಲಿಂಗೇಶ್ವರ ಮಠದ ವೀರಭದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಸಂಸ್ಥೆ ಅಧ್ಯಕ್ಷ ಎಲ್.ಬಿ.ಚೌಗುಲೆ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆ ಕಾರ್ಯದರ್ಶಿ ವಿನಯ ಚೌಗುಲೆ, ಪ್ರಾಚಾರ್ಯ ಎಸ್.ಎಸ್.ದಿಗ್ಗೇವಾಡಿ, ಶಿವಾನಂದ ನಾಂದಣಿ, ಪಿ.ಬಿ.ಮುನ್ಯಾಳ, ಸುರೇಶ ಬೆಳಗಾಂವಕರ ಹಾಗೂ ಉಪನ್ಯಾಸಕರು ಇತರರಿದ್ದರು. ಬಿ.ಬಿ.ನಾಟೆಕರ ಹಾಗೂ ಎಂ.ಐ.ಬಡಿಗೇರ ಕಾರ್ಯಕ್ರಮ ನಿರ್ವಹಿಸಿದರು.