ದೇವಸಮುದ್ರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಟ್ಯೂಷನ್ ಆರಂಭಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಯೋಜನಾಧಿಕಾರಿ ಎಂ.ಎ.ಹಾಲಪ್ಪ ಚಾಲನೆ ನೀಡಿದರು. ಗ್ರಾಪಂ.ಸದಸ್ಯ ವೆಂಕೋಬಾ ನಾಯಕ, ಒಕ್ಕೂಟದ ಅಧ್ಯಕ್ಷ ಸೋಮಲಿಂಗಮ್ಮ, ಸಮನ್ವಯ ಅಧಿಕಾರಿ ರೇಖಾ, ಸೇವಾ ಪ್ರತಿನಿಧಿ ವನಜಾಕ್ಷಮ್ಮ, ಶಿಕ್ಷಕರಾದ ಕೆ.ರಾಮಚಂದ್ರರಾವ್, ಎಚ್.ಬಸವನಗೌಡ ಇತರರಿದ್ದರು. 
ಜಿಲ್ಲೆ

ಉತ್ತಮ ಶಿಕ್ಷಣದಿಂದ ಸಾಧನೆ ಸಾಧ್ಯ

ರುದ್ರಪ್ಪ ವಾಲಿ

ಕಂಪ್ಲಿ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಶ್ರೇಣಿ ಸಾಧಿಸಲು ಮಕ್ಕಳಿಗೆ ಹೆಚ್ಚುವರಿ(ಟ್ಯೂಷನ್) ತರಗತಿ ಆಯೋಜಿಸಿದ್ದು ಸ್ವಾಗತಾರ್ಹವಾಗಿದೆ ಎಂದು ತಾಲೂಕಿನ ದೇವಸಮುದ್ರ ಗ್ರಾಮದ ಸರ್ಕಾರಿ ಪ್ರೌಢಶಾಲೆ ಶಿಕ್ಷಕಿ ಎಚ್.ಶಕುಂತಲಾ ಹೇಳಿದರು.

ದೇವಸಮುದ್ರ ಸರ್ಕಾರಿ ಪ್ರೌಢಶಾಲೆಯಲ್ಲಿ ಮಂಗಳವಾರ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್‌ನಿಂದ 10ನೇತರಗತಿ ವಿದ್ಯಾರ್ಥಿಗಳಿಗೆ ವಿಶೇಷ ಟ್ಯೂಷನ್ ಕ್ಲಾಸ್ ಆರಂಭೋತ್ಸವ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದರು.

ಗ್ರಾಮೀಣ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿದಲ್ಲಿ ಸಾಧನೆಗೆ ಅನುಕೂಲವಾಗುತ್ತದೆ. ಈ ದಿಸೆಯಲ್ಲಿ ಟ್ರಸ್ಟ್ ಟ್ಯೂಷನ್ ಹಮ್ಮಿಕೊಂಡಿದ್ದು ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಉತ್ತಮ ಕಾರ್ಯವಾಗಿದೆ ಎಂದರು.

ಟ್ರಸ್ಟ್ ಯೋಜನಾಧಿಕಾರಿ ಎಂ.ಎ.ಹಾಲಪ್ಪ ಟ್ಯೂಷನ್ ಆರಂಭ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಗ್ರಾಮೀಣ ಮಕ್ಕಳು ಎಸ್ಸೆಸ್ಸೆಲ್ಸಿಯಲ್ಲಿ ಉತ್ತಮ ಶ್ರೇಣಿ ಗಳಿಸಲೆಂಬ ಹಿನ್ನೆಲೆಯಲ್ಲಿ ಅನುಭವವುಳ್ಳ 3 ಅತಿಥಿ ಶಿಕ್ಷಕರನ್ನು ಟ್ಯೂಷನ್‌ಗೆ ನೇಮಿಸಿದೆ. ಮಕ್ಕಳು ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದರು.