ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಪಡುಬಿದ್ರಿ ಶಾಖೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಆಯೋಜಿಸಲಾದ ವೈದ್ಯಕೀಯ, ನೇತ್ರ, ದಂತ ತಪಾಸಣೆ ಚಿಕಿತ್ಸಾ ಶಿಬಿರವನ್ನು ಶೀನ ಪೂಜಾರಿ ಉದ್ಘಾಟಿಸಿದರು 
ಜಿಲ್ಲೆ

ಆತ್ಮಶಕ್ತಿ ಸಹಕಾರಿಯಿಂದ ಉತ್ತಮ ಕಾರ್ಯ : ವೈದ್ಯಕೀಯ ತಪಾಸಣೆ ಶಿಬಿರ ಉದ್ಘಾಟಿಸಿ ಶೀನ ಪೂಜಾರಿ ಶ್ಲಾಘನೆ

ಇಂದಿರಾ ಎನ್ ಕೆ

ವಿಜಯವಾಣಿ ಸುದ್ದಿಜಾಲ ಪಡುಬಿದ್ರಿ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ, ಅಧ್ಯಕ್ಷ ಚಿತ್ತರಂಜನ್ ಬೋಳಾರ್ ಮುಂದಾಳತ್ವದಲ್ಲಿ ಆರೋಗ್ಯ ಉಚಿತ ಶಿಬಿರ ಆಯೋಜಿಸಿ ಉತ್ತಮ ಕೆಲಸಗಳನ್ನು ಮಾಡುತ್ತಿದೆ. ಬಡವರ್ಗದ ಜನರಿಗೆ ಇದರಿಂದ ಅನುಕೂಲವಾಗಿದೆ ಎಂದು ಪಡುಬಿದ್ರಿ ಕಣ್ಣಂಗಾರು ಶ್ರೀ ಬ್ರಹ್ಮಬೈದರ್ಕಳ ಗರಡಿ ಅಧ್ಯಕ್ಷ ಶೀನ ಪೂಜಾರಿ ಹೇಳಿದರು.

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಪಡುಬಿದ್ರಿ ಶಾಖೆಯ ದ್ವಿತೀಯ ವಾರ್ಷಿಕೋತ್ಸವ ಪ್ರಯುಕ್ತ ರೋಟರಿ ಕ್ಲಬ್ ಪಡುಬಿದ್ರಿ ಹಾಗೂ ಯುವವಾಹಿನಿ ಪಡುಬಿದ್ರಿ ಘಟಕ ಆಶ್ರಯದಲ್ಲಿ ಪಡುಬಿದ್ರಿ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ವೈದ್ಯಕೀಯ, ನೇತ್ರ ತಪಾಸಣಾ ಹಾಗೂ ದಂತ ತಪಾಸಣೆ ಚಿಕಿತ್ಸಾ ಶಿಬಿರವನ್ನು ಭಾನುವಾರ ಉದ್ಘಾಟಿಸಿ ಮಾತನಾಡಿದರು.

ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್, ದೇರಳಕಟ್ಟೆ ಯೇನೆಪೊಯ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ವೈದ್ಯಾಧಿಕಾರಿ ಡಾ.ಸಾಹಿಲ್, ಪಡುಬಿದ್ರಿ ಗ್ರಾಪಂ ಮಾಜಿ ಉಪಾಧ್ಯಕ್ಷೆ ಯಶೋದಾ, ಅಡ್ವೆ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ನವೀನ್‌ಚಂದ್ರ ಸುವರ್ಣ, ರೋಟರಿ ಕ್ಲಬ್ ಪಡುಬಿದ್ರಿ ನಿಯೋಜಿತ ಅಧ್ಯಕ್ಷೆ ತಸ್ಲಿನ್ ಅರಾ ಶುಭಹಾರೈಸಿದರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕರಾದ ರಮಾನಾಥ್ ಸನಿಲ್, ಚಂದ್ರಹಾಸ ಮರೋಳಿ, ಗೋಪಾಲ್ ಎಂ., ರೋಟರಿ ಕ್ಲಬ್ ಅಧ್ಯಕ್ಷ ಸಂತೋಷ್ ಪಡುಬಿದ್ರಿ, ಯುವವಾಹಿನಿ ಪಡುಬಿದ್ರಿ ಘಟಕ ಅಧ್ಯಕ್ಷ ಅಶ್ವತ್ಥ್, ಸಮುದಾಯ ದಂತ ವಿಭಾಗ, ಯೇನೆಪೊಯ ದಂತ ಕಾಲೇಜಿನ ಟ್ಯುಟರ್ ಡಾ.ವೀನು ಜೋಸೆಫ್ ಉಪಸ್ಥಿತರಿದ್ದರು. ಸಂಘದ ಹಿರಿಯ ಶಾಖಾಧಿಕಾರಿ ರವಿಕಲಾ ಸ್ವಾಗತಿಸಿದರು. ಹಿರಿಯ ಶಾಖಾಧಿಕಾರಿ ಸ್ವಾತಿ ನಿರೂಪಿಸಿದರು. ಪ್ರಭಾರ ಶಾಖಾಧಿಕಾರಿ ಶಮಿತಾ ವಂದಿಸಿದರು.

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಪ್ರತಿವರ್ಷ ಶಾಖೆಗಳ ವಾರ್ಷಿಕೋತ್ಸವದ ಸಂದರ್ಭ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಆರೋಗ್ಯ ಶಿಬಿರ ಏರ್ಪಡಿಸುತ್ತಾ ಬಂದಿದ್ದು, ಇದು ಸಂಘದ 69ನೇ ಉಚಿತ ವೈದ್ಯಕೀಯ ಶಿಬಿರವಾಗಿದೆ. ಸಂಘ 15 ಸಾವಿರ ಮಿಕ್ಕಿ ಶಿಬಿರಾರ್ಥಿಗಳಿಗೆ ಉಚಿತವಾಗಿ ಕನ್ನಡಕ ವಿತರಿಸಿದೆ. ಅಲ್ಲದೇ 500 ಮಿಕ್ಕಿ ಶಿಬಿರಾರ್ಥಿಗಳಿಗೆ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಯನ್ನು ಆಸ್ಪತ್ರೆಗಳ ಸಹಯೋಗದೊಂದಿಗೆ ಮಾಡಿಸಿದೆ.-ಚಿತ್ತರಂಜನ್ ಬೋಳಾರ್, ಅಧ್ಯಕ್ಷ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ