ಕಣಕಟ್ಟೆ: ನಾಡಿನಾದ್ಯಂತ ಉತ್ತಮ ಸಮಾಜ ನಿರ್ಮಾಣ ಮಾಡಲು ಸ್ವ ಸಹಾಯ ಸಂಘಗಳು ಸಹಕಾರಿಯಾಗಿವೆ ಎಂದು ಶ್ರೀ ಕ್ಷೇತ್ರ ಪುಷ್ಪಗಿರಿ ಮಠದ ಪೀಠಾಧ್ಯಕ್ಷ ಡಾ.ಶ್ರೀ ಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ಅಭಿಪ್ರಾಯಪಟ್ಟರು.
ಶ್ರೀ ನಗರದ 15ನೇ ವಾರ್ಡ್‌ನಲ್ಲಿ ಪುಷ್ಪಗಿರಿ ಗ್ರಾಮೀಣಾಭಿವೃದ್ಧಿ ಸಂಸ್ಥೆ ವತಿಯಿಂದ ನಿರ್ಮಿಸಿರುವ ಶುದ್ಧ ಕುಡಿಯುವ ನೀರಿನ ಘಟಕವನ್ನು ಇತ್ತೀಚೆಗೆ ಉದ್ಘಾಟಿಸಿ ಮಾತನಾಡಿದರು. ಸಮಾಜದಲ್ಲಿ ಉತ್ತಮ ವ್ಯವಹಾರ ಮತ್ತು ಸಾಮಾಜಿಕ ದೃಷ್ಟಿಯಿಂದ ಕಾರ್ಯನಿರ್ವಹಿಸಬೇಕಿದೆ. ಹೆಚ್ಚು ಸ್ವ ಸಹಾಯ ಸಂಘಗಳ ರಚಿಸಿ ಆ ಮೂಲಕ ಚಟುವಟಿಕೆಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು.
ಸಮಾಜ ಸೇವಕ ನಿರಂಜನ್, ಶಿಲ್ಪಾ ಸಂತೋಷ್, ತಿಮ್ಮನಹಳ್ಳಿ ಜಗದೀಶ್, ಶಿವಲಿಂಗಪ್ಪ, ರಾಜೇಂದ್ರ, ಮಂಜುನಾಥ್, ತ್ರಿಮೂರ್ತಿ, ಮಲ್ಲಿಕಾರ್ಜುನ್ ಹಾಜರಿದ್ದರು.