ಜಿಲ್ಲೆ

ಗೂಡ್ಸ್​ ವಾಹನ-ಕಾರು ಭೀಕರ ಅಪಘಾತ; ಒಬ್ಬ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಾಯ..

ಬೆಳಗಾವಿ: ಗೂಡ್ಸ್ ವಾಹನ ಮತ್ತು ಕಾರಿನ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರು ಚಾಲಕ ಸ್ಥಳದಲ್ಲೇ ಸಾವಿಗೀಡಾಗಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಈ ಅಪಘಾತ ಸಂಭವಿಸಿದೆ.

ಖಾನಾಪುರ ತಾಲೂಕಿನ ನಾಗರಾಗಳಿ ಬಳಿ ಕಾರು ಮತ್ತೆ ಗೂಡ್ಸ್​ ವಾಹನ ಮುಖಾಮುಖಿ ಡಿಕ್ಕಿಯಾಗಿವೆ. ಪರಿಣಾಮವಾಗಿ ಧಾರವಾಡ ಜಿಲ್ಲೆಯ ಅಳ್ನಾವರ ಪಟ್ಟಣದ ಕಾರು ಚಾಲಕ ಸಾಗರ ಬಿಡ್ಕರ್ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಅಳ್ನಾವರದ ಗೀರಿಶ್ ನಾಂದೋಲ್ಕರ್, ವೀರಣ್ಣ ಕೋಟಾರಶೆಟ್ಟಿ, ರೇಮಾಕಾಂತ ಪಾಲ್ಕರ್, ವಿಠ್ಠಲ ಕಾಕಡೆಗೆ ಎಂಬವರು ಗಾಯಗೊಂಡಿದ್ದಾರೆ. ಇವರೆಲ್ಲ ಕಾರಿನಲ್ಲಿ ಗೋವಾಗೆ ಹೊರಟಿದ್ದರು. ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಸ್ಥಳಕ್ಕೆ ಖಾನಾಪುರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.