ರಾಜ್ಯ ಮತ್ತು ಕೇಂದ್ರ ಸರ್ಕಾರ ಜನವಿರೋಧಿ ನೀತಿ ಅನುಸರಿಸುತ್ತಿವೆ ಎಂದು ಆರೋಪಿಸಿ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿದರು. ಜಯಶ್ರೀ ಮಾಳಗಿ, ಅರುಣ ಕಟಾಂಬಳೆ ಇತರರಿದ್ದರು. 
ಜಿಲ್ಲೆ

ಸರ್ಕಾರದಿಂದ ಜನವಿರೋಧಿ ನೀತಿ

ಬೆಳಗಾವಿ: ಉಭಯ ಸರ್ಕಾರಗಳು ಜನವಿರೋಧಿ ನೀತಿ ಅನುಸರಿಸುತ್ತಿವೆ ಎಂದು ಆರೋಪಿಸಿ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟಿಸಿದರು. ಭೂ ಸುಧಾರಣೆ ತಿದ್ದುಪಡಿ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ ಜಾರಿ ಸೇರಿ ಕರೊನಾ ಉಪಕರಣಗಳ ಖರೀದಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ವಿನಯ ನಾವಲಗಟ್ಟಿ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನವಿರೋಧಿ ಆಡಳಿತ ನಡೆಸುತ್ತಿದೆ. ರೈತರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿ ಅಧಿಕಾರಕ್ಕೆ ಬಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರೈತ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿದರು. ಪ್ರತಿಭಟನೆಯಲ್ಲಿ ಕಾಂಗ್ರೆಸ್ ನಾಯಕಿ, ಮಾಜಿ ನಗರಸೇವಕಿ ಜಯಶ್ರೀ ಮಾಳಗಿ, ಅರುಣ ಕಟಾಂಬಳೆ, ಪದಾಧಿಕಾರಿಗಳು ಕಾರ್ಯಕರ್ತರಿದ್ದರು.