ಜಿಲ್ಲೆ

ಕೃಷ್ಣ ಮಠಕ್ಕೆ ರಾಜ್ಯಪಾಲರ ಭೇಟಿ

ಗೋಪಾಲಕೃಷ್ಣ ಪಾದೂರ್

ಉಡುಪಿ:  ಜಿಲ್ಲಾ ರಜತೋತ್ಸವದ ಉದ್ಘಾಟನೆಗೆ ಆಗಮಿಸಿದ  ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗುರುವಾರ ಮಧ್ಯಾಹ್ನ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದರು.

ಪರ್ಯಾಯ ಶ್ರೀ ಕೃಷ್ಣಾಪುರ ಮಠದ ಶ್ರೀ  ವಿದ್ಯಾಸಾಗರ ತೀರ್ಥ ಸ್ವಾಮೀಜಿ ಅನುಗ್ರಹ ಮಂತ್ರಾಕ್ಷತೆ ನೀಡಿ, ರಾಜ್ಯಪಾಲರನ್ನು ಗೌರವಿಸಿದರು.

ಈ ಸಂದರ್ಭದಲ್ಲಿ ಕೇಂದ್ರ ಕೃಷಿ ಹಾಗೂ ರೈತ ಕಲ್ಯಾಣ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ, ಮೀನುಗಾರಿಕಾ ಬಂದರು ಮತ್ತು ಒಳನಾಡು ಜಲ ಸಾರಿಗೆ,  ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ, ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ ಸುನಿಲ್ ಕುಮಾರ್, ಶಾಸಕ ರಘುಪತಿ ಭಟ್ ಉಪಸ್ಥಿತರಿದ್ದರು.