ಜಿಲ್ಲೆ

ಮಂಗಳೂರಿಗೆ ಆಗಮಿಸಿದ ರಾಜ್ಯಪಾಲರು

reportermng

ಮಂಗಳೂರು: ಪುತ್ತೂರಿನ ವಿವೇಕಾನಂದ  ಕಲೆ, ವಾಣಿಜ್ಯ ಮತ್ತು ವಿಜ್ಞಾನ ಸ್ವಾಯತ್ತ ಕಾಲೇಜನ್ನು ಉದ್ಘಾಟಿಸಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್ ಅವರು ಮಂಗಳವಾರ ಮಂಗಳೂರಿಗೆ ಆಗಮಿಸಿದರು. ಬೆಳಗ್ಗೆ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿದ ಅವರನ್ನು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ., ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ, ಪೋಲಿಸ್ ಆಯುಕ್ತ ಶಶಿಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಷ್ ಭಗವಾನ್ ಸೋನಾವಣೆ, ಪಾಲಿಕೆ ಆಯುಕ್ತ ಅಕ್ಷಿ ಶ್ರೀಧರ್  ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸ್ವಾಗತಿಸಿದರು.
ಬಳಿಕ ರಾಜ್ಯಪಾಲರು ಪುತ್ತೂರಿನ ವಿವೇಕಾನಂದ ಕಾಲೇಜಿಗೆ ತೆರಳಿದರು.