ಜಿಲ್ಲೆ

ಕಾಂಗ್ರೆಸ್​ ಸಚಿವರ ಭೇಟಿಗೆ ರಾಜ್ಯಪಾಲರ ನಿರಾಕರಣೆ; ಸಿದ್ದರಾಮಯ್ಯ ಕಾನೂನು ಹೋರಾಟಕ್ಕೆ ಈಗ ಮತ್ತೊಂದು ಅಡ್ಡಿ ಶುರು

ಬೆಂಗಳೂರು:  ರಾಜ್ಯಪಾಲರು ಮುಡಾ ಅಕ್ರಮ  ಪ್ರಕರಣದಲ್ಲಿ ಮಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ಕೊಟ್ಟ ಬೆನ್ನಲ್ಲೇ ಕಾಂಗ್ರೆಸ್​​ನಲ್ಲಿ ತಳಮಳ ಸೃಷ್ಟಿಯಾಗಿದೆ.  ಇಂದು ಸಂಜೆ 5.30ಕ್ಕೆ ಕರೆದಿದ್ದ ದಿಢೀರ್ ಸಚಿವ ಸಂಪುಟ ಸಭೆಯನ್ನ ಕಾಂಗ್ರೆಸ್ ಸರ್ಕಾರ ಅಷ್ಟೇ ದಿಢೀರ್ ಆಗಿ ರದ್ದುಗೊಳಿಸಿ ರಾಜ್ಯಪಾಲರ ಭೇಟಿ ಮಾಡುವ ಪ್ಲ್ಯಾನ್​ ಹಾಕಿಕೊಂಡಿತ್ತು. ಆದರೆ ಇದೀಗ ಗರ್ವನರ್ ಕಚೇರಿಯಿಂದ ಡಿಸಿಎಂ ಹಾಗೂ ಸಚಿವರ ಭೇಟಿಗೆ ಸಮಯ ನಿರಾಕರಿಸಲಾಗಿದೆ.

ಮುಖ್ಯಮಂತ್ರಿ ವಿರುದ್ಧ ತನಿಖೆಗೆ ಗ್ರೀನ್‌ಸಿಗ್ನಲ್ ಸಿಕ್ಕ ಮೇಲೆ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯಾಗುತ್ತಿದೆ. ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಬಳಿಕ ಡಿಸಿಎಂ ಡಿ.ಕೆ ಶಿವಕುಮಾರ್ ಹಾಗೂ ಸಚಿವರು ರಾಜ್ಯಪಾಲರ ಭೇಟಿಗೆ ಅವಕಾಶ ಕೇಳಿದ್ದರು. ಆದರೆ ಗರ್ವನರ್ ಕಚೇರಿಯಿಂದ ಡಿಸಿಎಂ ಹಾಗೂ ಸಚಿವರ ಭೇಟಿಗೆ ಸಮಯ ನಿರಾಕರಿಸಲಾಗಿದೆ.

ಮುಡಾ ಹಗರಣದ ಪ್ರಾಸಿಕ್ಯೂಷನ್​ನಿಂದ ಬಚಾವಾಗಲು ಸಿಎಂ ಸಿದ್ದರಾಮಯ್ಯನವರ ಲೀಗಲ್ ಟೀಂ ಈಗಾಗಲೇ ಸಜ್ಜಾಗಿದೆ. ಸಿದ್ದರಾಮಯ್ಯ ಪರವಾಗಿ ರಿಟ್ ಅರ್ಜಿ ಸಲ್ಲಿಸಲು ಎಲ್ಲಾ ಸಿದ್ಧತೆಗಳನ್ನು ಸಿದ್ದು ಲೀಗಲ್ ಟೀಂ ಮಾಡಿಕೊಂಡಿತ್ತು. ಸೀನಿಯರ್ ಪೊನ್ನಣ್ಣ ಅವರು ರಿಟ್ ಅರ್ಜಿ ಸಲ್ಲಿಸಿ, ರಾಜ್ಯಪಾಲರು ಪ್ರಾಸಿಕ್ಯೂಷನ್ ಅರ್ಜಿಯನ್ನು ಹೈಕೋರ್ಟ್​ನಲ್ಲಿ ಪ್ರಶ್ನಿಸಲು ಮುಂದಾಗಿದ್ದರು. ಆದ್ರೆ ಈಗ ಅದಕ್ಕೂ ಕೂಡ ಕಂಟ. ಸಿಎಂ ಸಿದ್ದರಾಮಯ್ಯನ ಲೀಗಲ್ ಟೀಂ ಹೈಕೋರ್ಟ್​​ಗೆ ಅರ್ಜಿ ಸಲ್ಲಿಸುವ ಮುನ್ನವೇ ದೂರುದಾರ ಪ್ರದೀಪ್​ ಕುಮಾರ್ ಅವರು ಕೆವಿಯಟ್ ಅರ್ಜಿ ಸಲ್ಲಿಸಿದ್ದಾರೆ.

ಏನಿದು ಮುಡಾ ಅಕ್ರಮ ಪ್ರಕರಣ:  ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ 50-50 ಅನುಪಾತದಲ್ಲಿ 14 ಮುಡಾ ಸೈಟ್‌ಗಳನ್ನ ಹಂಚಿಕೆ ಮಾಡಲಾಗಿದೆ ಅನ್ನೋ ವಿಚಾರ ವಿವಾದಕ್ಕೆ ಕಾರಣವಾಗಿತ್ತು.  ಆರ್.ಟಿ.ಐ ಕಾರ್ಯಕರ್ತ ಗಂಗರಾಜು ಎಂಬುವವರು ಇದರಲ್ಲಿ ಅಕ್ರಮ ಮಂಜೂರಾತಿ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಸಿಎಂ ಪತ್ನಿಗೆ 14 ನಿವೇಶನ ಮಂಜೂರಾದ ದಾಖಲೆಗಳನ್ನು ಬಿಡುಗಡೆ ಮಾಡಿದ್ದರು.

ದಾಖಲೆಗಳ ಜೊತೆ ಆರೋಪಿಸಿರುವ ಆರ್.ಟಿ.ಐ ಕಾರ್ಯಕರ್ತ ಗಂಗರಾಜು ಅವರು, ಸಿಎಂ ಸಿದ್ದರಾಮಯ್ಯ ಅವರ ಪತ್ನಿಗೆ ಬದಲಿ ನಿವೇಶನ ನೀಡಿ ಲಾಭ ಮಾಡಿಕೊಟ್ಟಿರುವುದು ನಿಜ. ಮೈಸೂರಿನ ಕೆಸರೆ ಸರ್ವೇ ನಂಬರ್ 464 ವ್ಯಾಪ್ತಿಯಲ್ಲಿ 3.16 ಗಂಟೆ ಜಾಮೀನು ಸ್ವಾಧೀನ ಮಾಡಿಕೊಂಡಿದ್ದಾರೆ. ಇದಕ್ಕೆ ಪರ್ಯಾಯವಾಗಿ ವಿಜಯನಗರದ ಬಡಾವಣೆಯಲ್ಲಿ 14 ನಿವೇಶನವನ್ನು ಸಿಎಂ ಪತ್ನಿಯ ಹೆಸರಿಗೆ ನೀಡಿದ್ದಾರೆ ಎಂದು ಆರೋಪಿಸಿದ್ದರು.

ಭೂಮಿ ವಶಪಡಿಸಿಕೊಂಡ ಜಾಗ ಬಿಟ್ಟು ಅಥವಾ ಸಮಾನಾಂತರವಾದ ಜಾಗ ಬಿಟ್ಟು ವಿಜಯನಗರದಲ್ಲಿ ಅಭಿವೃದ್ಧಿ ಆಗಿರುವ 38ಸಾವಿರದ 284 ಚದರಡಿ ಭೂಮಿ ಹಂಚಿಕೆ ಮಾಡಲಾಗಿದೆ. ಅಲ್ಲದೇ, 1998ರಲ್ಲಿ ಕಳೆದುಕೊಂಡ ಭೂಮಿಗೆ 2021ರಲ್ಲಿ ಪರಿಹಾರ ನೀಡಲಾಗಿದೆ ಎಂಬುದು ಆರ್‌ಟಿಐ ಕಾರ್ಯಕರ್ತರ ಆರೋಪವಾಗಿದೆ.