ಜಿಲ್ಲೆ

ಗೋವಿಂದು ರಾಘವಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ

ಗುಂಡ್ಲುಪೇಟೆ: ತಾಲೂಕಿನ ರಾಘವಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಗೋವಿಂದು ಆಯ್ಕೆಯಾದರೆ, ಉಪಾಧ್ಯಕ್ಷೆಯಾಗಿ ಸುಧಾರಾಣಿ ಮುಂದುವರಿದಿದ್ದಾರೆ. ಕಾಂಗ್ರೆಸ್‌ನ ಒಳ ಒಪ್ಪಂದದಂತೆ ಹಿಂದೆ ಅಧ್ಯಕ್ಷರಾಗಿದ್ದ ಆರ್.ಡಿ.ಉಲ್ಲಾಸ್ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಬುಧವಾರ ಚುನಾವಣೆ ನಡೆಯಿತು. ಬಿಜೆಪಿ ಬೆಂಬಲಿತ ಅಭ್ಯರ್ಥಿ ಶಶಿ 6 ಮತ ಪಡೆದರೆ ಗೋವಿಂದು 10 ಮತಗಳಿಸಿ ಅಧ್ಯಕ್ಷರಾಗಿ ಆಯ್ಕೆಯಾದರು ಎಂದು ಚುನಾವಣಾಧಿಕಾರಿ ಅಕ್ಷಯ್ ಪ್ರಕಟಿಸಿದರು. ಗ್ರಾಮಪಂಚಾಯಿತಿ ಸದಸ್ಯರು, ಮುಖಂಡರು ಹಾಗೂ ಗ್ರಾಮಸ್ಥರು ಇದ್ದರು.