ಜಿಲ್ಲೆ

ಸರ್ಕಾರದ ಯೋಜನೆಗಳ ಬಳಸಿಕೊಳ್ಳಿ

ಕವಿತಾಳ: ಸಾರ್ವಜನಿಕರ ಅನುಕೂಲಕ್ಕಾಗಿ ಸರ್ಕಾರ ಬ್ಯಾಂಕ್ ಸವಲತ್ತು ನೀಡುತ್ತಿದ್ದು, ಸದುಪಯೋಗ ಪಡೆದುಕೊಳ್ಳಬೇಕೆಂದು ಕರ್ನಾಟಕ ಗ್ರಾಮೀಣ ಬ್ಯಾಂಕ್ ವ್ಯವಸ್ಥಾಪಕ ರಮೇಶ ಪತ್ತಾರ ಹೇಳಿದರು.

ಪಾಮನಕಲ್ಲೂರಿನ ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಲ್ಲಿ ಆಯೋಜಿಸಿದ್ದ ಪ್ರಧಾನ ಮಂತ್ರಿ ಸಂಕಲ್ಪ ಶಪಥ್ ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಣೆ ಸಮಾರಂಭದಲ್ಲಿ ಶನಿವಾರ ಮಾತನಾಡಿದರು. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವಾರು ಯೋಜನೆಗಳ ಸದುಪಯೋಗವನ್ನು ಪಡೆದುಕೊಳ್ಳಬೇಕು. ಈ ಕುರಿತ ಮಾಹಿತಿಗಾಗಿ ಸಂಬಂಧಿಸಿದವರನ್ನು ಸಂಪರ್ಕಿಸಬೇಕು ಎಂದರು.