ಉಪ್ಪುಂದ ಪೇಟೆಯಲ್ಲಿ ಬೈಂದೂರು ಬಿಜೆಪಿ ಮಂಡಲದ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು 
ಜಿಲ್ಲೆ

ಗ್ಯಾರಂಟಿಯಿಂದ ಸರ್ಕಾರದ ಖಜಾನೆ ಖಾಲಿ : ಪ್ರತಿಭಟನೆಯಲ್ಲಿ ಗುರುರಾಜ್ ಗಂಟಿಹೊಳೆ ಹೇಳಿಕೆ

ಇಂದಿರಾ ಎನ್ ಕೆ

ಬೈಂದೂರು: ಪೊಳ್ಳು ಆಶ್ವಾಸನೆಗಳ ಮೂಲಕ ಅಧಿಕಾರಕ್ಕೇರಿದ ಕಾಂಗ್ರೆಸ್ ರಾಜ್ಯಾದ್ಯಂತ ಅಭಿವೃದ್ಧಿ ಕಾರ್ಯ ನಿಲ್ಲಿಸಿದೆ. ಗ್ಯಾರಂಟಿ ಮೂಲಕ ಸರ್ಕಾರದ ಖಜಾನೆ ಖಾಲಿ ಮಾಡಿದ್ದಲ್ಲದೆ ದಿನಬಳಕೆ ಸಾಮಗ್ರಿಗಳ ಬೆಲೆ ಹೆಚ್ಚಿಸುತ್ತಿದೆ. ಸರ್ಕಾರ ತಕ್ಷಣ ತನ್ನ ನಿರ್ಧಾರದಿಂದ ಹಿಂದೆ ಸರಿಯದಿದ್ದರೆ ಜನರಿಗಾಗಿ ಪಕ್ಷ ಯಾವುದೇ ಹೋರಾಟಕ್ಕೂ ಹಿಂಜರಿಯುವುದಿಲ್ಲ ಎಂದು ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು.

ರಾಜ್ಯ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ಗುರುವಾರ ಸಂಜೆ ಉಪ್ಪುಂದ ಪೇಟೆಯಲ್ಲಿ ಬೈಂದೂರು ಬಿಜೆಪಿ ಮಂಡಲ ವತಿಯಿಂದ ನಡೆದ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದರು. ಬೈಂದೂರು ಬಿಜೆಪಿ ಮಂಡಲ ಅಧ್ಯಕ್ಷ ನೆಲ್ಯಾಡಿ ದೀಪಕ್ ಕುಮಾರ್ ಶೆಟ್ಟಿ ಮಾತನಾಡಿದರು. ಪಕ್ಷದ ಕಾರ್ಯಕರ್ತರು ರಸ್ತೆ ತಡೆ ನಡೆಸಿದರು. ವಾಹನಕ್ಕೆ ಹಗ್ಗ ಕಟ್ಟಿ ಎಳೆಯುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಮಂಡಲದ ಪದಾಧಿಕಾರಿಗಳು, ಪಕ್ಷದ ಪ್ರಮುಖರು ಇದ್ದರು.