ಜಿಲ್ಲೆ

ಬಿ.ಆರ್. ಲಕ್ಷ್ಮಣರಾವ್‌ಗೆ ಗೌರಿಸುಂದರ್ ಪ್ರಶಸ್ತಿ

ಪಂಕಜ ಕೆ.ಎಂ.

ಬೆಂಗಳೂರು: ಸುಂದರ ಪ್ರಕಾಶನ ವತಿಯಿಂದ ಕೊಡಮಾಡುವ 2024ನೇ ಸಾಲಿನ ‘ಗೌರಿಸುಂದರ್ ವಾರ್ಷಿಕ ಪ್ರಶಸ್ತಿ’ಗೆ ಕವಿ ಬಿ.ಆರ್. ಲಕ್ಷ್ಮಣರಾವ್ ಭಾಜನರಾಗಿದ್ದಾರೆ. ಪ್ರಶಸ್ತಿಯು 10 ಸಾವಿರ ರೂ. ನಗದು, ಸ್ಮರಣಿಕೆ ಹೊಂದಿದ್ದು, ಮಾ.30ರಂದು ಸಂಜೆ 6 ಗಂಟೆಗೆ ಬೆಂಗಳೂರಿನ ಸುಚಿತ್ರ ಫಿಲ್ಮ್ ಸೊಸೈಟಿಯಲ್ಲಿ ನಡೆಯುವ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು ಎಂದು ಸಮಿತಿ ಅಧ್ಯಕ್ಷ ಡಾ. ಎಚ್.ಎಸ್. ವೆಂಕಟೇಶಮೂರ್ತಿ ಹಾಗೂ ಕಾರ್ಯದರ್ಶಿ ಇಂದಿರಾ ಸುಂದರ್ ತಿಳಿಸಿದ್ದಾರೆ.