ಮೈಸೂರು: ರಾಘವೇಂದ್ರನಗರದ ಬಳಿ ಬೈಕಿನಲ್ಲಿ ಬಂದ ಸರಗಳ್ಳರು, ಸ್ಕೂಟರ್‌ನಲ್ಲಿ ತೆರಳುತ್ತಿದ್ದ ಮಹಿಳೆಯ ಚಿನ್ನದ ಸರ ಕಸಿದುಕೊಂಡು ಪರಾರಿಯಾಗಿದ್ದಾರೆ.
ಭರತನಗರದ ನಿವಾಸಿ ಉಮಾ 60 ಸಾವಿರ ರೂ.ಮೊತ್ತದ ಚಿನ್ನದ ಸರ ಕಳೆದುಕೊಂಡಿದ್ದಾರೆ.
ಭಾನುವಾರ ರಾತ್ರಿ 10ಗಂಟೆ ಸಮಯದಲ್ಲಿ ತಮ್ಮ ದ್ವಿಚಕ್ರ ವಾಹನದಲ್ಲಿ ಮನೆಗೆ ಹೋಗುತ್ತಿದ್ದರು. ಈ ಸಂದರ್ಭದಲ್ಲಿ ಹಿಂದಿನಿಂದ ಬೈಕಿನಲ್ಲಿ ಬಂದ ಸರಗಳ್ಳರು, ಇವರ ಚಿನ್ನದ ಸರ ಕಸಿದುಕೊಂಡು ಹೋಗಿದ್ದಾರೆ. ನಜರಬಾದ್ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.