ಮಸ್ಕಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಕೊಟ್ಟ ಮಾತಿನಂತೆ ನಡೆದುಕೊಂಡಿದೆ ಎಂದು ಶಾಸಕ ಆರ್.ಬಸನಗೌಡ ತುರ್ವಿಹಾಳ ಹೇಳಿದರು.
ಪಟ್ಟಣದಲ್ಲಿ ಮಂಗಳವಾರ ಸರ್ಕಾರಿ ನೌಕರರನ್ನು ಭೇಟಿ ಮಾಡಿ ಮಾತನಾಡಿದರು. ಬಿಜೆಪಿ ಸರ್ಕಾರದ ಆಡಳಿತ ಅವಧಿಯಲ್ಲಿ ಪದವೀಧರರು ಸೇರಿದಂತೆ ಅನೇಕರು ಬಹಳಷ್ಟು ಸಮಸ್ಯೆ ಅನುಭವಿಸಬೇಕಾಯಿತು. ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದಿರುವುದರಿಂದ ಈ ಭಾಗದ ಸಮಗ್ರ ಅಭಿವೃದ್ಧಿಯೊಂದಿಗೆ ಪದವೀಧರರ ಸಮಸ್ಯೆಗಳನ್ನು ಪರಿಹರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.
ಪ್ರಮುಖರಾದ ಅಂದಾನಪ್ಪ ಗುಂಡಳ್ಳಿ, ಬಸನಗೌಡ ಪೊಲೀಸ್ ಪಾಟೀಲ್, ಎಂ.ಅಮರೇಶ, ಶ್ರೀಶೈಲಪ್ಪ ಬ್ಯಾಳಿ, ಆನಂದ ವೀರಾಪುರ, ಶರಣಪ್ಪ ಎಲಿಗಾರ ಇತರರಿದ್ದರು.