ಹುಲಿಕೆರೆ ಗ್ರಾಮದಲ್ಲಿರುವ ಬಿಜಿಎಸ್ ಶಾಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಯುಕೆಜಿ ಮಕ್ಕಳಿಗೆ ಪದವಿ ಪ್ರದಾನ ಮಾಡಲಾಯಿತು. ಶ್ರೀ ಸೋಮೇಶ್ವರನಾಥ ಸ್ವಾಮೀಜಿ ಇದ್ದರು. 
ಜಿಲ್ಲೆ

ಬಿಜಿಎಸ್ ಶಾಲೆಯ ಯು.ಕೆ.ಜಿ ಮಕ್ಕಳಿಗೆ ಪದವಿ ಪ್ರದಾನ

ಕೆ.ಆರ್.ಸಾಗರ: ಹುಲಿಕೆರೆ ಗ್ರಾಮದಲ್ಲಿರುವ ಬಿಜಿಎಸ್ ಶಾಲೆಯಲ್ಲಿ ಇತ್ತೀಚೆಗೆ ಶಾರದಾ ಪೂಜೆ ಮತ್ತು ಯು.ಕೆ.ಜಿ ಮಕ್ಕಳಿಗೆ ಪದವಿ ಪ್ರದಾನ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಶಾರದಾ ಮಾತೆಯ ಭಾವಚಿತ್ರಕ್ಕೆ ಆದಿಚುಂಚನಗಿರಿ ಮೈಸೂರು ಶಾಖಾ ಮಠದ ಶ್ರೀ ಸೋಮೇಶ್ವರನಾಥ ಸ್ವಾಮೀಜಿ ಪೂಜೆ ಸಲ್ಲಿಸಿ ಮಂಗಾಳಾರತಿ ಮಾಡಿದರು. ಬಳಿಕ ಮಾತನಾಡಿ, ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸಿ ಪಾಲಕರಿಗೆ ಉತ್ತಮ ಹೆಸರು ತರುವಂತಾಗಲಿ ಎಂದು ಆಶಿಸಿದರು.

ನಂತರ ನಡೆದ ಪದವಿ ಪ್ರದಾನ ಕಾರ್ಯಕ್ರದಲ್ಲಿ ಯುಕೆಜಿ ಮಕ್ಕಳಿಗೆ ಪ್ರತ್ಯೇಕವಾಗಿ ಪದವಿ ಪ್ರದಾನ ಮಾಡಿದರು. ಶಾಲಾ ಮುಖ್ಯ ಶಿಕ್ಷಕಿ ಆಶಾ ಇತರರಿದ್ದರು.