ಸಿರಿಗೆರೆ: ಇಲ್ಲಿನ ಬಿಎಲ್‌ಆರ್ ಪದವಿಪೂರ್ವ ಕಾಲೇಜು ಆವರಣದಲ್ಲಿ ಸೆ.20 ರಿಂದ 24ರವರೆಗೆ ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿಗಳ 31ನೇ ಶ್ರದ್ಧಾಂಜಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಐದು ದಿನಗಳ ಕಾಲ ನಡೆಯಲಿರುವ ಸಮಾರಂಭಕ್ಕೆ ಈಗಾಗಲೇ ಸಿದ್ಧತೆ ಕೈಗೊಳ್ಳಲಾಗಿದ್ದು, ಬೃಹತ್ ವೇದಿಕೆ ನಿರ್ಮಿಸಲಾಗಿದೆ. ಗ್ರಾಮದ ಪ್ರಮುಖ ಬೀದಿಗಳ ಸ್ವಚ್ಛತಾ ಕಾರ್ಯ ಮುಂದುವರೆದಿದ್ದು, ವಿದ್ಯುತ್ ದೀಪಗಳಿಂದ ಅಲಂಕೃತಗೊಳಿಸಲಾಗಿದೆ.
ಆರೋಗ್ಯ, ವಿಜ್ಞಾನ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ಒತ್ತು ನೀಡಲಾಗುತ್ತಿದೆ. ಕಾರ್ಯಕ್ರಮದ ಸಾನ್ನಿಧ್ಯವನ್ನು ತರಳಬಾಳು ಜಗದ್ಗುರು ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ವಹಿಸಲಿದ್ದಾರೆ.
ಚಂದ್ರಯಾನ 3ರಲ್ಲಿ ಭಾಗಿಯಾದ ವಿಜ್ಞಾನಿಗಳಾದ ರಾಮನಗೌಡ ವಿ.ನಾಡಗೌಡ, ಬಿ.ಎಚ್.ಎಂ.ದಾರುಕೇಶ್, ಗೋವಿಂದರಾಜ ಶೆಟ್ಟಿ ಅವರೊಂದಿಗೆ ಸಂವಾದ ಏರ್ಪಡಿಸಲಾಗಿದೆ.
ತರಳಬಾಳು ವಿದ್ಯಾಸಂಸ್ಥೆಯ ಹಿರಿಯ ವಿದ್ಯಾರ್ಥಿ ಹಾಗೂ ನಿವೃತ್ತ ನೌಕರರ ಸಮಾವೇಶ ನಡೆಯಲಿದೆ.
24ರಂದು ರೈತ ಸಮಾವೇಶ ಆಯೋಜಿಸಲು ನಿರ್ಧರಿಸಲಾಗಿದ್ದು, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶಾಸಕ ಶಾಮನೂರು ಶಿವಶಂಕರಪ್ಪ, ಕೇಂದ್ರ ಸಚಿವ ಎಂ.ನಾರಾಯಣಸ್ವಾಮಿ, ಸಭಾಪತಿ ಬಸವರಾಜ್ ಹೊರಟ್ಟಿ, ಸಂಸದ ಜಿ.ಎಂ.ಸಿದ್ದೇಶ್ವರ, ಸಚಿವರಾದ ಕೆ.ಎಚ್.ಮುನಿಯಪ್ಪ,
ಎಚ್.ಸಿ.ಮಹಾದೇವಪ್ಪ, ಎಸ್.ಎಸ್.ಮಲ್ಲಿಕಾರ್ಜುನ, ಪ್ರಕಾಶ್ ಪಾಟೀಲ್, ಈಶ್ವರ್ ಖಂಡ್ರೆ, ಡಿ.ಸುಧಾಕರ್, ಶಿವರಾಜ್ ತಂಗಡಗಿ, ಮಧು ಬಂಗಾರಪ್ಪ, ಶಾಸಕರಾದ ಬಿ.ಜಿ.ಗೋವಿಂದಪ್ಪ, ಎಚ್.ಕೆ.ಸುರೇಶ್, ಬಿ.ಪಿ.ಹರೀಶ್, ಕೆ.ಎಸ್.ಬಸವಂತಪ್ಪ, ಕೆ.ಸಿ.ವೀರೇಂದ್ರ ಪಪ್ಪಿ, ಬಿ.ವೈ.ವಿಜಯೇಂದ್ರ,
ಡಿ.ಜೆ.ಶಾಂತನಗೌಡ, ಯು.ಬಿ.ಬಣಕಾರ್, ಬಿ.ದೇವೇಂದ್ರಪ್ಪ, ಶಿವಗಂಗಾ ಬಸವರಾಜ್, ಲತಾ ಮಲ್ಲಿಕಾರ್ಜುನ್, ಪ್ರಕಾಶ್ ಕೋಳಿವಾಡ, ಎಂ.ಚಂದ್ರಪ್ಪ, ಎಚ್.ಡಿ.ತಮ್ಮಯ್ಯ, ಜಿ.ಎಚ್.ಶ್ರೀನಿವಾಸ್, ಮಾಜಿ ಸಚಿವ ಎಚ್.ಆಂಜನೇಯ ಭಾಗವಹಿಸಲಿದ್ದಾರೆ.
ಸಮಾರೋಪ ಸಮಾರಂಭಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.