ಜಿಲ್ಲೆ

ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

ಮಂಜುನಾಥ ತಿಮ್ಮಯ್ಯ

ಮೈಸೂರು: ದಿ ನ್ಯಾಷನಲ್ ಇನ್ಸ್‌ಟಿಟ್ಯೂಟ್ ಆಫ್ ಇಂಜಿನಿಯರಿಂಗ್(ಎನ್‌ಐಇ) ಕಾಲೇಜಿನ 13ನೇ ಪದವಿ ಪ್ರದಾನ ಕಾರ್ಯಕ್ರಮ ನಡೆಯಿತು.


844 ಸ್ನಾತಕ, 126 ಸ್ನಾತಕೋತ್ತರ(ಎಂ.ಟೆಕ್, ಎಂಸಿಎ) ಸೇರಿದಂತೆ 970 ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣ ಪತ್ರವನ್ನು ಪ್ರದಾನ ಮಾಡಲಾಯಿತು. 49 ಸ್ನಾತಕ, 11 ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಚಿನ್ನದ ಪದಕ ನೀಡಲಾಯಿತು.


21 ಸಂಶೋಧನಾ ವಿದ್ಯಾರ್ಥಿಗಳು ಪಿಎಚ್.ಡಿ ಪೂರ್ಣಗೊಳಿಸಿದ್ದಕ್ಕಾಗಿ ಚಿನ್ನದ ಪದಕ, ಪ್ರಮಾಣ ಪಡೆದುಕೊಂಡರು. 66 ವಿದ್ಯಾರ್ಥಿಗಳಿಗೆ ವಿವಿಧ ದತ್ತ ಪ್ರಶಸ್ತಿ ನೀಡಲಾಯಿತು.


ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಡಾ.ಎಸ್.ವಿದ್ಯಾಶಂಕರ್, ಎನ್‌ಐಇ ಆಡಳಿತ ಮಂಡಳಿಯ ಅಧ್ಯಕ್ಷ ಡಾ.ಎಂ.ಎಸ್.ರಂಗನಾಥ್, ಪ್ರಾಂಶುಪಾಲೆ ಡಾ.ರೋಹಿಣಿ ನಾಗಪದ್ಮಾ, ಉಪ ಪ್ರಾಂಶುಪಾಲ ಡಾ.ಎಂ.ಎಸ್.ಗಣೇಶ್‌ಪ್ರಸಾದ್ ಇನ್ನಿತರರು ಪಾಲ್ಗೊಂಡಿದ್ದರು.