ಜಿಲ್ಲೆ

ಶಿರಂಗಾಲ ಗ್ರಾ.ಪಂ. ಗ್ರಾಮ ಸಭೆ

ಸುನಿಲ್ ಪೊನ್ನೇಟಿ

ಕುಶಾಲನಗರ:

ಶಿರಂಗಾಲ ಗ್ರಾಮ ಪಂಚಾಯಿತಿಯ 2024-25ನೇ ಸಾಲಿನ ಗ್ರಾಮಸಭೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಎಂ. ಆರ್. ಲತಾಬಾಯಿ ಅಧ್ಯಕ್ಷತೆಯಲ್ಲಿ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆಯಿತು. ಸಭೆಯಲ್ಲಿ ಹಾಜರಿದ್ದ ಗ್ರಾಮಸ್ಥರು ಶಿರಂಗಾಲ ಗ್ರಾಮ ಪಂಚಾಯತಿ ವ್ಯಾಪ್ತಿಯ ಪ್ರದೇಶ ಹಾರಂಗಿ ಅಚ್ಚುಕಟ್ಟು ವ್ಯಾಪ್ತಿಗೆ ಸೇರುತ್ತಿದ್ದು ಈ ಭಾಗದಲ್ಲಿ ನೂರಾರು ರೈತರು ಹಾರಂಗಿ ಅಣೆಕಟ್ಟೆಯ ನೀರು ಬಳಕೆ ಮಾಡಿಕೊಂಡು ಬೇಸಾಯ ಮಾಡುತ್ತಿದ್ದಾರೆ. ಈ ಗ್ರಾಮೀಣ ಭಾಗದಲ್ಲಿ ರೈತರ ಜಮೀನಿಗೆ ತೆರಳಲು ಅನುಕೂಲ ಕಲ್ಪಿಸುವ ದೃಷ್ಟಿಯಿಂದ ನೀರಾವರಿ ಇಲಾಖೆ ಮುಖೇನ ಗ್ರಾಮೀಣ ಭಾಗದ ಉಪ ರಸ್ತೆಗಳನ್ನು ನಿರ್ಮಿಸಿಕೊಂಡುವAತೆ ಒತ್ತಾಯ ಮಾಡಿದರು.

ಸಭೆಯಲ್ಲಿ ಹಾಜರಿದ್ದ ವಿವಿಧ ಇಲಾಖೆ ಅಧಿಕಾರಿಗಳು ಒದಗಿಸಲಾಗುತ್ತಿರುವ ಸವಲತ್ತುಗಳ ಬಗ್ಗೆ ಹಾಗೂ ಇಲಾಖಾ ಕಾರ್ಯಕ್ರಮಗಳ ಬಗ್ಗೆ ಸಮಗ್ರವಾದ ಮಾಹಿತಿ ನೀಡಿದರು. ಶಿರಂಗಾಲ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸೋಲಾರ್ ದೀಪ ಅಳವಡಿಸಲು ಮಂಟಿಗಮ್ಮ ದೇವಸ್ಥಾನ ಸಮಿತಿಯಿಂದ ಐವತ್ತು ಸಾವಿರ ರೂ. ಒದಗಿಸಲಾಗಿದ್ದು, ಗ್ರಾಮ ಪಂಚಾಯಿತಿಯಿAದ 1 ಲಕ್ಷ ರೂ.ಅನುದಾನ ಒದಗಿಸುವಂತೆ ಸಭೆಯಲ್ಲಿ ಗ್ರಾಮಸ್ಥರು ಆಗ್ರಹಿಸಿದರು. ಉದ್ಯೋಗ ಖಾತ್ರಿ ಯೋಜನೆ

ಕ್ರಿಯಾ ಯೋಜನೆ ತಯಾರಿಸಲು, ಸಾರ್ವಜನಿಕರಿಂದ ಅರ್ಜಿಗಳನ್ನು ಸ್ವೀಕರಿಸಲಾಯಿತು.

ಶಿರಂಗಾಲ ಗ್ರಾಮದಲ್ಲಿ ಅಂಗನವಾಡಿ ಕೇಂದ್ರ-3ರ ಕಟ್ಟಡ ನಿರ್ಮಾಣ ಮಾಡಲು ಇಲಾಖೆ ವತಿಯಿಂದ ಈಗಾಗಲೇ 12 ಲಕ್ಷ ರೂ. ಬಿಡುಗಡೆಯಾಗಿದ್ದು, ಉದ್ಯೋಗ ಖಾತ್ರಿ ಯೋಜನೆಯಡಿ 8 ಲಕ್ಷ ರೂ.ಗೆ ಕ್ರಿಯಾಯೋಜನೆ ತಯಾರಿಸಲಾಗಿದೆ. ಒಟ್ಟು 20 ಲಕ್ಷ ರೂ. ವೆಚ್ಚದಲ್ಲಿ ಕಟ್ಟಡ ನಿರ್ಮಾಣಕ್ಕೆ ಕ್ರಿಯಾ ಯೋಜನೆ ತಯಾರಿಸಿದ್ದು ಮುಂದಿನ ದಿನಗಳಲ್ಲಿ ಕಟ್ಟಡವನ್ನು ನಿರ್ಮಾಣ ಮಾಡಬೇಕಾಗಿದೆ. ಇದಕ್ಕಾಗಿ ಶಿರಂಗಾಲ ಗ್ರಾಮದ ಸರ್ವೆ ನಂಬರ್ 183 ರಲ್ಲಿ 5 ಸೆಂಟ್ ಜಾಗವನ್ನು ಶಿಶು ಅಭಿವೃದ್ಧಿ ಯೋಜನೆ ಅಧಿಕಾರಿ ಅವರ ಹೆಸರಿಗೆ ಮಂಜೂರು ಮಾಡಲಾಗಿರುತ್ತದೆ. ಆದರೆ ಈ ಜಾಗವನ್ನು ಕೆಲವು ಗ್ರಾಮಸ್ಥರು ಒತ್ತುವರಿ ಮಾಡಿಕೊಂಡು ಕೊಟ್ಟಿಗೆ ನಿರ್ಮಿಸಿದ್ದು, ಕೂಡಲೇ ಜಾಗ ತೆರವುಗೊಳಿಸುವಂತೆ ಗ್ರಾಮ ಪಂಚಾಯತಿ ವತಿಯಿಂದ ನೊಟೀಸ್ ನೀಡಲಾಗಿದೆ. ನಿಗದಿತ ಅವಧಿಯೊಳಗೆ ತೆರವುಗೊಳಿಸುವಂತೆ ಶಿಶು ಅಭಿವೃದ್ಧಿ ಯೋಜನೆ ಅಧಿಕಾರಿ ಸಭೆಯಲ್ಲಿ ತಿಳಿಸಿದರು.

ಗ್ರಾ.ಪಂ. ಅಧ್ಯಕ್ಷೆ ಎಂ. ಆರ್. ಲತಾಬಾಯಿ ಮಾತಾನಾಡಿ ಗ್ರಾಮಸಭೆಯಲ್ಲಿ ಚರ್ಚಿಗೊಂಡ ವಿಷಯಗಳನ್ನು ಈಗಾಗಲೇ ನೊಂದಣಿ ಪುಸ್ತಕದಲ್ಲಿ ನೊಂದಣಿ ಮಾಡಲಾಗಿದೆ. ಅದರನ್ವಯ ಸಂಬAಧಿಸಿದ ಇಲಾಖೆಗೆ ಪತ್ರವ್ಯವಹಾರ ಮಾಡಲಾಗುವುದು. ಅಲ್ಲದೆ ಸಭೆಯಲ್ಲಿ ಚರ್ಚೆಯಾದಂತೆ ಶುಚಿತ್ವಕ್ಕೆ ಹೆಚ್ಚಿನ ಅದ್ಯತೆ ನೀಡುವ ಉದ್ದೇಶದಿಂದ ಗ್ರಾಮದ ಎಲ್ಲಾ ವಾರ್ಡಗಳಲ್ಲಿ ಕಸ ವಿಲೇವಾರಿ ಸೇರಿದಂತೆ ಸಾಂಕ್ರಾಮಿಕ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ವಹಿಸಲಾಗುವುದು ಎಂದರು.

ನೋಡಲ್ ಅಧಿಕಾರಿಯಾಗಿ ಸೋಮವಾರಪೇಟೆ ತಾಲೂಕು ತೋಟಗಾರಿಕಾ ಇಲಾಖೆಯ ಹಿರಿಯ ನಿರ್ದೇಶಕಿ ಲಿಖಿತಾ ರಾಜ್ ಭಾಗವಹಿಸಿದ್ದರು.

ಸಭೆಯಲ್ಲಿ ಉಪಾಧ್ಯಕ್ಷ ಹೆಚ್.ಎಸ್.ಬಸವರಾಜು, ಸದಸ್ಯರಾದ ಧರ್ಮಪ್ಪ ಎನ್.ಎನ್., ಪ್ರದೀಪ್ ಎಸ್.ಎ., ಭಾಗೀರಥಿ ಬಿ.ಹೆಚ್., ಸರಿತಾ ಡಿ.ಎಸ್., ಲಕ್ಷ್ಮಿ, ಪಿಡಿಒ ಹೇಮಲತಾ, ಕಾರ್ಯದರ್ಶಿ ಕೆ.ಸಿ. ರವಿ ಇದ್ದರು.