ಜಿಲ್ಲೆ

ಕೂಡುಮಂಗಳೂರು ಗ್ರಾಮಸಭೆಯಲ್ಲಿ ಸಮಸ್ಯೆಗಳ ಪ್ರತಿಧ್ವನಿ

ಸುನಿಲ್ ಪೊನ್ನೇಟಿ

ಕುಶಾಲನಗರ:

ಕೂಡುಮಂಗಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ 2024-25 ನೇ ಸಾಲಿನ ಗ್ರಾಮ ಸಭೆ ಅಧ್ಯಕ್ಷ ಡಿ. ಭಾಸ್ಕರ್ ನಾಯಕ್ ಅಧ್ಯಕ್ಷತೆಯಲ್ಲಿ ಬುಧವಾರ ನಡೆಯಿತು. ಸಭೆಯಲ್ಲಿ ಹಿಂದಿನ ಗ್ರಾಮ ಸಭೆಯ ವರದಿ ಮಂಡಿಸುವ ಸಂದರ್ಭ ಕಳೆದ ಬಾರಿ ಚರ್ಚೆಯಾದ ಪ್ರಮುಖ ವಿಷಯವಾದ ಕೂಡ್ಲೂರು ಕೈಗಾರಿಕಾ ಕೇಂದ್ರದಲ್ಲಿರುವ ವಿವಿಧ ಕೈಗಾರಿಕಾ ಘಟಕದವರಿಂದ ತೆರಿಗೆ ವಸೂಲಾತಿ ಮಾಡದಿರುವ ಬಗ್ಗೆ ಸಭೆಯಲ್ಲಿ ಸಿ.ವಿ. ನಾಗೇಶ್, ಸಣ್ಣಪ್ಪ, ರಾಜು ಸೇರಿದಂತೆ ಹಲವರು ಅಕ್ಷೇಪ ವ್ಯಕ್ತಪಡಿಸಿದರು. ಕಳೆದ ಸಾಲಿನ ಗ್ರಾಮ ಸಭೆಯಲ್ಲಿ ಕೈಗೊಂಡ ನಿರ್ಣಯಗಳನ್ನು ಕ್ರಮಬದ್ದವಾಗಿ ಸಂಬAಧಿಸಿದ ಇಲಾಖೆಗೆ ಪತ್ರವ್ಯವಹಾರ ಮಾಡದ ಬಗ್ಗೆ ಮತ್ತು ಕೈಗಾರಿಕಾ ಘಟಕದ ವ್ಯಾಪ್ತಿಯ ಎಂಜಿನಿಯರ್ ಸಭೆಗೆ ಬಾರದ ಬಗ್ಗೆ ಚರ್ಚೆಗಳು ನಡೆದವು.

ಸಭೆಯಲ್ಲಿ ಗ್ರಾಮ ಪಂಚಾಯತಿ ನೂತನ ಕಟ್ಟಡಕ್ಕೆ ಸಂಬAಧಿಸಿದAತೆ ಜಾಗದ ವಿಷಯಕ್ಕೆ ಮತ್ತು ಬಸವತ್ತೂರು ಗ್ರಾಮದ ಬೆಟ್ಟದ ಕಡೆಯಿಂದ ಬರುವ ಮಳೆಯ ನೀರು ಸರಾಗವಾಗಿ ಹರಿಯಲು ಸಮರ್ಪಕವಾದ ಚರಂಡಿ ವ್ಯವಸ್ಥೆ ಮಾಡದೆ ನೀರು ಸಮೀಪ ಮನೆಗಳಿಗೆ ಮತ್ತು ರಾಜ್ಯ ಹೆದ್ದಾರಿ ಮೇಲೆ ಹರಿಯುತ್ತಿರುವ ಬಗ್ಗೆ, ಆನೆಕೆರೆ, ಚೋಳನ ಕೆರೆಗೆ ಸಂಬAಧಿಸಿದAತೆ ಅದರ ಅಭಿವೃದ್ಧಿ ಪೂರಕವಾದ ಯೋಜನೆಯನ್ನು ಕೈಗೊಳ್ಳುವ ವಿಷಯಗಳ ಬಗ್ಗೆ ಸಭೆಯಲ್ಲಿ ಹಾಜರಿದ್ದ ಗ್ರಾಮಸ್ಥರು ವಿಷಯ ಪ್ರಸ್ತಾವನೆ ಮಾಡಿದರು.

ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಶುಚಿತ್ವಕ್ಕೆ ಹೆಚ್ಚಿನ ಅದ್ಯತೆ ಮತ್ತು ಗ್ರಾಮ ಪಂಚಾಯತಿ ವ್ಯಾಪ್ತಿಯ ಉಪ ರಸ್ತೆಗಳ ಕಾಮಗಾರಿಯನ್ನು ಸಂಪೂರ್ಣವಾಗಿ ಪೂರ್ಣಗೊಳಿಸಲು ಸಭೆಯಲ್ಲಿ ಹಾಜರಿದ್ದ ಮಂಜುನಾಥ, ಪ್ರವೀಣ್ , ದಿನೇಶ್ ಸೇರಿದಂತೆ ಅನೇಕ ಗ್ರಾಮಸ್ಥರು ಆಗ್ರಹಿಸಿದರು.

ಕೂಡುಮಂಗಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕಳೆದ ಮೂರು ದಿನಗಳಿಂದ ಅಕಾಲಿಕ ಮಳೆಯಿಂದಾಗಿ ವಿವಿಧ ಬೆಳೆಗಳು ನೆಲಕಚ್ಚಿ ಹಾನಿಯಾಗಿರುವುದರಿಂದ ಸ್ಧಳಕ್ಕೆ ಸಂಬAಧಿಸಿದ ಅಧಿಕಾರಿ ವರ್ಗದವರು ಭೇಟಿ ನೀಡಿ ಪರಿಶೀಲನೆ ನಡೆಸಿ ರೈತರಿಗೆ ಪರಿಹಾರ ಒದಗಿಸುವಂತೆ ರೈತÀರಾದ ಕೆ.ವಿ. ಸಣ್ಣಪ್ಪ, ಪ್ರಕಾಶ್, ಕುಮಾರ್ ಜಗದೀಶ್ ಸಭೆಯಲ್ಲಿ ಒತ್ತಾಯ ಮಾಡಿದರು.

ಕಂದಾಯ ಇಲಾಖೆಗೆ ಸೇರಿದ ಜಾಗವನ್ನು ಒತ್ತುವರಿ ಮಾಡಿಕೊಂಡಿರುವ ಸ್ಥಳವನ್ನು ತೆರವುಗೊಳಿಸಲು ಕ್ರಮ ವಹಿಸುವಂತೆ ಗ್ರಾಮಸ್ಥರು ಸಭೆಯಲ್ಲಿ ಒತ್ತಾಯಿಸಿದರು. ಗ್ರಾಮ ಸಭೆಯಲ್ಲಿ ಹಾಜರಿದ್ದ ವಿವಿಧ ಇಲಾಖೆಯ ಅಧಿಕಾರಿಗಳು ತಮ್ಮ ತಮ್ಮ ಇಲಾಖೆಗೆ ಸಂಬAಧಿಸಿದ ಸಂಪೂರ್ಣವಾದ ಮಾಹಿತಿ ಮತ್ತು ಸವಲತ್ತುಗಳನ್ನು ಒದಗಿಸುವ ಯೋಜನೆಯ ಬಗ್ಗೆ ಮಾಹಿತಿ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಅಧ್ಯಕ್ಷ ಭಾಸ್ಕರ್ ನಾಯಕ್ ಮಾತಾನಾಡಿ ಸಭೆಯಲ್ಲಿ ಚರ್ಚೆಯಾದ ವಿಷಯಗಳನ್ನು ಕ್ರಮಬದ್ಧವಾಗಿ ದಾಖಲು ಮಾಡಲಾಗಿದೆ. ಅದರಂತೆ ಮುಂದಿನ ದಿನಗಳಲ್ಲಿ ಸಂಬAಧಿಸಿದ ಇಲಾಖೆಯವರಿಗೆ ಪತ್ರ ವ್ಯವಹಾರ ಮಾಡಲಾಗುವುದು. ನೂತನ ಗ್ರಾಮ ಪಂಚಾಯತಿ ಕಟ್ಟಡದ ಜಾಗದ ವಿಷಯದ ಬಗ್ಗೆ ಸಂಬAಧಿಸಿದ ಸಚಿವರೊಂದಿಗೆ ಪತ್ರವ್ಯವಹಾರ ಮಾಡಿ ಮುಂದಿನ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

ಸಭೆಯ ನೋಡಲ್ ಅಧಿಕಾರಿಯಾಗಿ ಕೂಡಿಗೆ ಕೋಳಿ ಸಾಕಾಣಿಕೆ ಕೇಂದ್ರದ ಹಿರಿಯ ಪಶುವೈದ್ಯಾಧಿಕಾರಿ ಕೆ.ನಾಗರಾಜು ಆಗಮಿಸಿದ್ದರು. ಸಭೆಯಲ್ಲಿ ಉಪಾಧ್ಯಕ್ಷೆ ಶಶಿಕಲಾ ಸೇರಿದಂತೆ ಸರ್ವ ಸದಸ್ಯರು, ಅಭಿವೃದ್ಧಿ ಅಧಿಕಾರಿ ಎಂ.ಆರ್. ಸಂತೋಷ್ ಗ್ರಾಮಸ್ಥರು ಭಾಗವಹಿಸಿದ್ದರು.