ಬಳ್ಳಾರಿ: ಅಭ್ಯರ್ಥಿಯ ಚಿಹ್ನೆ ತಪ್ಪು ಮುದ್ರಣಕ್ಕೆ ಸಂಬಂಧಿಸಿದಂತೆ ಶಂಕರಬಂಡೆ ಗ್ರಾಪಂ ವ್ಯಾಪ್ತಿಯ ತೊಲಮಾಮಡಿ ಮತಗಟ್ಟೆಯಲ್ಲಿ ಮತದಾನ ಮುಂದೂಡಲಾಗಿದೆ.
ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಹಾಗೂ ಎಸ್ಪಿ ಸೈದಲು ಅಡಾವತ್, ಸಹಾಯಕ ಆಯುಕ್ತ ರಮೇಶ ಕೋನರೆಡ್ಡಿ, ತಹಸೀಲ್ದಾರ್ ರೆಹಾನ್ ಪಾಷಾ ಗ್ರಾಮಕ್ಕೆ ಭೇಟಿ ನೀಡಿದ್ದರು. ಅಭ್ಯರ್ಥಿ ಪದ್ಮಾವತಿ ಅವರಿಗೆ ಮಡಕೆ ಚಿಹ್ನೆ ಬದಲಿಗೆ ಸಿಲಿಂಡರ್ ಚಿಹ್ನೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಮತದಾನ ಸ್ಥಗಿತಗೊಳಿಸಲಾಗಿದೆ. ಈ ಕುರಿತು ಚುನಾವಣಾ ಆಯೋಗಕ್ಕೆ ವರದಿ ಸಲ್ಲಿಕೆಯಾಗಿದೆ.
ಎರಡನೇ ಹಂತದ ಚುನಾವಣೆ ನಡೆಯುವ. ಡಿ.27 ಅಥವಾ ಬೇರೆ ದಿನ ತೊಲಮಾಮಿಡಿಯ ನಿರ್ದಿಷ್ಟ ಮತಗಟ್ಟೆಯಲ್ಲಿ ಮತದಾನ ನಡೆಸಲಾಗುವುದು. ಗ್ರಾಪಂ ರಿಟರ್ನಿಂಗ್ ಅಧಿಕಾರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ನಕುಲ್ ತಿಳಿಸಿದ್ದಾರೆ.
ಕ್ಷಣ ಕ್ಷಣದ ಸುದ್ದಿಗಳ ಅಪ್ಡೇಟ್ಸ್ಗಾಗಿ ನಮ್ಮ ಫೇಸ್ಬುಕ್ ಪುಟ ಲೈಕ್ ಮಾಡಿ ಮತ್ತು ಫಾಲೋ ಮಾಡಿ..