ಚಿಕ್ಕಬಳ್ಳಾಪುರ: ಇಲ್ಲಿನ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಕೈಗೊಂಡಿದ್ದ ಕರ್ನಾಟಕ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಪ್ರಥಮ ಸಮ್ಮೇಳನದಲ್ಲಿ ಜಿಲ್ಲಾ ನೂತನ ಸಮಿತಿಯನ್ನು ಆಯ್ಕೆ ಮಾಡಲಾಗಿದೆ. ಸಮಿತಿಯ ಗೌರವಾಧ್ಯಕ್ಷ ಜಿ.ಹನುಮೇಶ್, ಅಧ್ಯಕ್ಷೆ ಸರಸ್ವತಮ್ಮ, ಉಪಾಧ್ಯಕ್ಷರಾಗಿ ಲಕ್ಷ್ಮೀ, ಮಂಜುಳಾ, ಜಯಮ್ಮಮತ್ತು ಮಮತಾ ರೆಡ್ಡಿ, ಕಾರ್ಯದರ್ಶಿ ರೇಷ್ಮಾ, ಜಂಟಿ ಕಾರ್ಯದರ್ಶಿಗಳಾಗಿ ಸುಶೀಲ, ಸುಜಾತ, ಸುಗುಣ, ಕೃಷ್ಣವೇಣಿ, ನಂದಿ ಮಂಜುಳ, ಲಲಿತಾ ಮತ್ತು ಕಾರ್ಯಕಾರಿ ಸಮಿತಿಯ 42 ಸದಸ್ಯರನ್ನು ಆಯ್ಕೆ ಮಾಡಲಾಯಿತು.
*ಸಮ್ಮೇಳನದಲ್ಲಿ ಬೇಡಿಕೆಗಳ ಚರ್ಚೆ
ಸಮ್ಮೇಳನದಲ್ಲಿ ಆಶಾ ಕಾರ್ಯಕರ್ತೆಯರ ಸಂಘದಲ್ಲಿ ವಿವಿಧ ಬೇಡಿಕೆ ಈಡೇರಿಕೆಯ ಬಗ್ಗೆ ಚರ್ಚಿಸಲಾಯಿತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಮಹೇಶ್ ಕುಮಾರ್ ಗೆ ಮನವಿ ಪತ್ರ ಸಲ್ಲಿಸಿದರು.
ಆಶಾ ಕಾರ್ಯಕರ್ತೆಯರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣನೆ, ಅಲ್ಲಿಯವರೆಗೆ ಸಾಮಾಜಿಕ ಭದ್ರತೆ ಮತ್ತು ಕಾರ್ಮಿಕರ ಸೌಲಭ್ಯಗಳುಳನ್ನು ಒದಗಿಸುವುದು, ಸಾರ್ವಜನಿಕ ಆರೋಗ್ಯವನ್ನು ಬಲಪಡಿಸಲು ಅಗತ್ಯವಿರುವಷ್ಟು ಬಜೆಟ್ ನಿಗದಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಆಶಾ ಕಾರ್ಯಕರ್ತೆಯರಿಗೆ ಮಾಸಿಕ ಕನಿಷ್ಠ 15,000 ರೂ ಪ್ರೋತ್ಸಾಹ ಧನ ಮತ್ತು ಇತರ ಸವಲತ್ತುಗಳು, 60 ವರ್ಷಕ್ಕೆ ಸೇವಾ ನಿವೃತ್ತಿ ಪಡೆಯುವ ಕಾರ್ಯಕರ್ತೆಯರಿಗೆ ಪಶ್ಚಿಮ ಬಂಗಾಳ ರಾಜ್ಯದ ಮಾದರಿಯಲ್ಲಿ ನಿವೃತ್ತಿ ಹಣವನ್ನು 3 ಲಕ್ಷಕ್ಕೆ ಹೆಚ್ಚಿಸುವುದು, ಮೃತಪಟ್ಟಾಗ 2 ಲಕ್ಷ ರೂ ಪರಿಹಾರ ಸೇರಿದಂತೆ ವಿವಿಧ ಸೌಲಭ್ಯಗಳ ಬಗ್ಗೆ ಗಮನ ಸೆಳೆಯಲಾಯಿತು. ಈ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಉಪಾಧ್ಯೆ ಟಿ.ಸಿ.ರಮಾ ಮತ್ತಿತರರು ಇದ್ದರು.