ಜಿಲ್ಲೆ

ಈಶ್ವರ ದೇವಸ್ಥಾನ ಜೀರ್ಣೋದ್ಧಾರಕ್ಕೆ ಅನುದಾನ

ವಿಜಯವಾಣಿ ಸುದ್ದಿಜಾಲ ಧಾರವಾಡ

ಇಲ್ಲಿನ ತಪೋವನ ನಗರದ ಈಶ್ವರ ದೇವಸ್ಥಾನ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್​ನ ಧಾರವಾಡ ಗ್ರಾಮೀಣ ಯೋಜನಾ ಕಚೇರಿ ವತಿಯಿಂದ ಮಂಜೂರಾದ ಅನುದಾನದ ಚೆಕ್​ ಅನ್ನು ಇತ್ತೀಚೆಗೆ ಹಸ್ತಾಂತರಿಸಲಾಯಿತು.

ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ವಸಂತ ಅರ್ಕಾಚಾರ ಅವರು ದೇವಸ್ಥಾನ ಕಮಿಟಿಗೆ 1.50 ಲಕ್ಷ ರೂ. ಚೆಕ್​ ಹಸ್ತಾಂತರಿಸಿ ಮಾತನಾಡಿ, ಡಾ.ಡಿ. ವೀರೇಂದ್ರ ಹೆಗ್ಗಡೆ ಅವರು ಕ್ಷೇತ್ರದ ವತಿಯಿಂದ ಅನೇಕ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದಾರೆ. ಗ್ರಾಮೀಣಾಭಿವೃದ್ಧಿ ಯೋಜನೆ ಮೂಲಕ ಕೆರೆಗಳ ಅಭಿವೃದ್ಧಿ, ನಿರ್ಗತಿಕರಿಗೆ ವಾತ್ಸಲ್ಯ ಮನೆ ನಿರ್ಮಾಣ, ಮಾಶಾಸನ, ಶಿಷ್ಯವೇತನ ಹೀಗೆ ಅನೇಕ ಕಾರ್ಯಕ್ರಮಗಳನ್ನು ರಾಜ್ಯಾದ್ಯಂತ ನೀಡಿದ್ದಾರೆ. ಅದೇ ರೀತಿ ದೇವಸ್ಥಾನಗಳ ಜೀರ್ಣೋದ್ಧಾರಕ್ಕೂ ಅನುದಾನವನ್ನು ನೀಡಿ ಧಾರ್ಮಿಕ ಶ್ರದ್ಧಾ ಕೇಂದ್ರಗಳನ್ನು ಅಭಿವೃದ್ಧಿಪಡಿಸುತ್ತಿದ್ದಾರೆ ಎಂದರು.

ಜಿಲ್ಲಾ ನಿರ್ದೇಶಕ ಪ್ರದಿಪ ಶೆಟ್ಟಿ ಮಾತನಾಡಿ, ಧರ್ಮಾಧಿಕಾರಿಗಳು ಆರ್ಥಿಕ, ಸಾಮಾಜಿಕ, ಶೈಕ್ಷ ಣಿಕ ವಲಯದಲ್ಲಿ ಸುಧಾರಣೆ ಮಾಡುವ ನಿಟ್ಟಿನಲ್ಲಿ ನೂರಾರು ಕಾರ್ಯಕ್ರಮಗಳನ್ನು ನೀಡಿದ್ದಾರೆ. ಅದರಲ್ಲಿ ದೇವಸ್ಥಾನಗಳ ಜೀರ್ಣೋದ್ಧಾರವೂ ಒಂದಾಗಿದೆ ಎಂದರು.

ತಾಲೂಕು ಯೋಜನಾಧಿಕಾರಿ ಮಯೂರ ತೋರಸ್ಕರ್​, ದೇವಸ್ಥಾನ ಕಮಿಟಿಯ ಜಿ.ಎಂ. ನಿಡಗುಂದಿ, ಎಚ್​.ಆರ್​.ಲಾತೂರ, ಎಂ.ಎಂ. ಕಲಾದಗಿ, ಇತರರು ಇದ್ದರು.