ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಸೋಮವಾರ ಎಸ್​ಸಿ&ಎಸ್​ಟಿ ದೌರ್ಜನ್ಯ ನಿಯಂತ್ರಣ, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ ಜರುಗಿತು. ಮೊಹಮ್ಮದ ರೋಷನ್​, ರಾಹುಲ್​ ಶಿಂಧೆ, ಇಡಾ ಮಾರ್ಟಿನ್​ ಮಾರ್ಬನ್ಯಾಂಗ್​, ಡಾ. ಭೀಮಾಶಂಕರ ಗುಳೇದ ಇತರರಿದ್ದರು. 
ಜಿಲ್ಲೆ

ಅನುದಾನ ದುರ್ಬಳಕೆಯಾದರೆ ಕ್ರಮ: ಜಿಲ್ಲಾಧಿಕಾರಿ ಎಚ್ಚರಿಕೆ

ಬೆಳಗಾವಿ: ಎಸ್​ಸಿ&ಎಸ್​ಟಿ ಅನುದಾನ ದುರ್ಬಳಕೆಯಾಗುತ್ತಿರುವ ಸಾಕಷ್ಟು ಆರೋಪಗಳು ಕೇಳಿ ಬರುತ್ತಿದ್ದು, ಗ್ರಾಪಂ, ನಗರ ಸ್ಥಳಿಯ ಸಂಸ್ಥೆ ಹಾಗೂ ಪಾಲಿಕೆಯಲ್ಲಿ ಎಸ್​ಸಿಪಿ& ಟಿಎಸ್​ಪಿ ಅನುದಾನ ದುರ್ಬಳಕೆಯಾಗದಂತೆ ನಿಗದಿತ ಅವಧಿಯೊಳಗೆ ಸಮರ್ಪಕ ಬಳಕೆಯಾಗಬೇಕು. ಒಂದುವೇಳೆ ದುರ್ಬಳಕೆ ಪ್ರಕರಣ ಕಂಡು ಬಂದಲ್ಲಿ ಕಾಯ್ದೆಯಡಿ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಮೊಹಮ್ಮದ್​ ರೋಷನ್​ ಎಚ್ಚರಿಕೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಸೋಮವಾರ ಎಸ್​ಸಿ&ಎಸ್​ಟಿ ದೌರ್ಜನ್ಯ ನಿಯಂತ್ರಣ, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯತೆ ವಹಿಸಿ ಮಾತನಾಡಿದರು.
 ಪ್ರಕರಣ ಇತ್ಯರ್ಥ ಬಳಿಕ ಭೂ ಮಂಜೂರಾತಿ: 

ಬೆಳವಡಿ ಗ್ರಾಮದಲ್ಲಿ ಜಮೀನು ಮಂಜೂರಾತಿಗೆ ಈಗಾಗಲೇ ಲೋಕೋಪಯೋಗಿ ಇಲಾಖೆಯಿಂದ ಜಮೀನು ಗುರುತಿಸಲಾಗಿದೆ. ಅದರ ಪಕ್ಕದ ಜಮೀನು ಮಾಲೀಕ ತಮ್ಮ ಸ್ವಂತ ಜಾ ಒತ್ತುವರಿಯಾಗಿದೆ ಎಂದು ನ್ಯಾಯಾಲಯದ ಮೊರೆ ಹೋಗಿದ್ದು, ನ್ಯಾಯಾಲಯದ ಹಂತದಲ್ಲಿ ಪ್ರಕರಣ ಇತ್ಯರ್ಥದ ಬಳಿಕ ಭೂಮಿ ಮಂಜೂರಾತಿಗೆ ಕ್ರಮ ವಹಿಸಲಾಗುವುದು ಎಂದು ಸೂಚಿಸಿದರು.

ಸ್ಮಶಾನ ಭೂಮಿ ಮಂಜೂರಾತಿಗೆ ಇಲಾಖೆಯ ವತಿಯಿಂದ ಬೇರೆ ಮಾಲ್ಕಿ ಜಾಮೀನು ಖರೀದಿಗೆ ಕ್ರಮ ವಹಿಸಲಾಗುವುದು. ಎಲ್ಲ ಇಲಾಖೆಗಳಲ್ಲಿ ಶೇ.24.1 ಅನುದಾನ ಸಮರ್ಪಕವಾಗಿ ಬಳಕೆ ಆಗಬೇಕು ಎಂದು ಹೇಳಿದರು.

ವಾರ್ಡ್​ ವಿಂಗಡಣೆ ನಂತರ ಅನುದಾನ:

ಬೆಳಗಾವಿ ಮಹಾನಗರ ಪಾಲಿಕೆಯ ವಾರ್ಡ್​ಗಳಲ್ಲಿ ಶೇ.50 ಎಸ್​ಸಿ ಅಥವಾ ಎಸ್​ಟಿ ಜನರಿದ್ದರೆ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರು ಡಿಕ್ಲೇರ್​ ಮಾಡಿ ಎಸ್​ಸಿ, ಎಸ್​ಟಿ ಕಾಲನಿ ಎಂದು ಪತ್ರ ನೀಡಿದ ಬಳಿಕ ವಾರ್ಡ್​ಗಳ ವಿಂಗಡಣೆ ಮಾಡಿ, ಅನುದಾನ ಬಳಕೆಗೆ ಕ್ರಮ ವಹಿಸಬೇಕು ಎಂದರು. ಮಹಾನಗರ ಪಾಲಿಕೆ ಉಪ ಆಯುಕ್ತ ಉದಯಕುಮಾರ ತಳವಾರ, ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ, ಜಿಲ್ಲಾ ದೌರ್ಜನ್ಯ ನಿಯಂತ್ರಣ ಸಮಿತಿಯ ನಾಮ ನಿರ್ದೇಶಿತ ಸದಸ್ಯ ಕರೆಪ್ಪ ಗುಡೇನ್ನವರ ಮಾತನಾಡಿದರು.

ಜಿಲ್ಲಾ ದೌರ್ಜನ್ಯ ನಿಯಂತ್ರಣ ಸಮಿತಿಯ ನಾಮ ನಿರ್ದೇಶಿತ ಸದಸ್ಯರಿಗೆ ಅಧಿಕೃತ ಗುರುತಿನ ಚೀಟಿ ವಿತರಿಸಿದರು. ನಗರ ಪೊಲೀಸ್​ ಆಯುಕ್ತ ಇಡಾ ಮಾರ್ಟಿನ್​ ಮಾರ್ಬನ್ಯಾಂಗ್​, ಜಿಪಂ ಸಿಇಒ ರಾಹುಲ್​ ಶಿಂಧೆ, ಡಿಸಿಪಿ ರೋಹನ್​ ಜಗದೀಶ, ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಅಧೀಕ ರವೀಂದ್ರ ಗಡಾದಿ, ಬೈಲಹೊಂಗಲ ಉಪ ವಿಭಾಗಾಧಿಕಾರಿ ಪ್ರಭಾವತಿ ಫಕೀರಪುರ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ, ಜಿಲ್ಲಾ ಆರೋಗ್ಯಾಧಿಕಾರಿ ಈಶ್ವರ ಗಡಾದಿ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಬಸವರಾಜ ಕುರಿಹುಲಿ ಇತರರಿದ್ದರು.

&&&

4ಜಗ್ಗು8:

ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಸೋಮವಾರ ಎಸ್​ಸಿ&ಎಸ್​ಟಿ ದೌರ್ಜನ್ಯ ನಿಯಂತ್ರಣ, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ ಜರುಗಿತು. ಮೊಹಮ್ಮದ ರೋಷನ್​, ರಾಹುಲ್​ ಶಿಂಧೆ, ಇಡಾ ಮಾರ್ಟಿನ್​ ಮಾರ್ಬನ್ಯಾಂಗ್​, ಡಾ. ಭೀಮಾಶಂಕರ ಗುಳೇದ ಇತರರಿದ್ದರು.