ಜಿಲ್ಲೆ

ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲೇ ರಸ್ತೆ ಅಭಿವೃದ್ಧಿಗೆ ಅನುದಾನ

ಚಾಮರಾಜನಗರ : ಈ ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿಯೇ ಚಾಮರಾಜನಗರ ಜಿಲ್ಲೆಯ ಎಲ್ಲ ತಾಲೂಕುಗಳ ರಸ್ತೆಗಳ ಅಭಿವೃದ್ಧಿಗೆ ಸಾವಿರಾರು ಕೋಟಿ ರೂ.ಅನುದಾನ ನೀಡಿದೆ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ತಿಳಿಸಿದರು. ಶನಿವಾರ ಖಾಸಗಿ ಕಾರ್ಯಕ್ರಮವೊಂದಕ್ಕೆ ಕೊಳ್ಳೇಗಾಲ ಪಟ್ಟಣಕ್ಕೆ ಆಗಮಿಸಿದ್ದ ವೇಳೆ ಅವರು ಸುದ್ದಿಗಾರರ ಜತೆ ಮಾತನಾಡಿದರು.


ಈ ಹಿಂದಿನ ಕಾಂಗ್ರೆಸ್ ಸರ್ಕಾರ ಇದ್ದಾಗಲೇ ಜಿಲ್ಲೆಯ ರಸ್ತೆ ಅಭಿವೃದ್ಧಿಗೆ ಸಾವಿರಾರು ಕೋಟಿ ರೂ. ಅನುದಾನ ನೀಡಿತ್ತು. ಈ ಕಾರಣಕ್ಕೆ ರಸ್ತೆಗಳು ಅಭಿವೃದ್ಧಿಯೊಂದಲು ಸಾಧ್ಯವಾಗಿದೆ. ಅದರಲ್ಲಿ ಕೊಳ್ಳೇಗಾಲ- ಹನೂರು ಕೆಶಿಪ್ ರಸ್ತೆಯೂ ಒಂದಾಗಿದೆ ಎಂದರು.


ಬಹಳ ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಪಟ್ಟಣದ ಡಾ.ಬಿ.ಆರ್.ಸಮುದಾಯ ಭವನ ನಿರ್ಮಾಣ ಕಾಮಗಾರಿ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿ ಪರಿಶೀಲಿಸಲಾಗುತ್ತದೆ. ಈ ಬಗ್ಗೆ ವರದಿ ನೀಡಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.

ಶಾಸಕ ಎ.ಆರ್.ಕೃಷ್ಣಮೂರ್ತಿ, ಮಾಜಿ ಶಾಸಕ ಎಸ್.ಜಯಣ್ಣ, ನಗರಸಭೆ ಸದಸ್ಯ ಶಾಂತರಾಜು ಬಸ್ತೀಪುರ, ಮಂಜುನಾಥ್, ಮಾಜಿ ಸದಸ್ಯ ರಮೇಶ್ ಶಾಂತರಾಜು ಮುಡಿಗುಂಡ, ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ರವಿ, ಮುಖಂಡರಾದ ಪಾಪಣ್ಣ, ಮುಳ್ಳೂರು ಶಿವಮಲ್ಲು, ಅನ್ಸರ್ ಬೇಗ್ ಮತ್ತಿತರಿದ್ದರು.