ಹಿರೇಕೆರೂರ: ತಾಲೂಕಿನ ಕಳಗೊಂಡ ಗ್ರಾಮದ ಗಜೇಂದ್ರ ಜಗದೀಶ ದೊಡ್ಮನಿ ಈತನು ಏ. 5ರಂದು ಗ್ರಾಮದ ಕೆರೆಯಲ್ಲಿ ಆಕಳು ಕರುಗಳಿಗೆ ನೀರುಣಿಸಲು ಹೋಗಿ ಆಕಸ್ಮಿಕವಾಗಿ ಕೆರೆಯಲ್ಲಿ ಕಾಲು ಜಾರಿ ಬಿದ್ದು ಸಾವನ್ನಪ್ಪಿದ ಹಿನ್ನಲೆಯಲ್ಲಿ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಈತನ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಮಂಜೂರಾಗಿದೆ ಎಂದು ಶಾಸಕ ಯು.ಬಿ. ಬಣಕಾರ ತಿಳಿಸಿದ್ದಾರೆ.
ಈ ಕುರಿತು ಗುರುವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸ್ವಚ್ಛ ಭಾರತ ಮಿಷನ್ (ಗ್ರಾ) ಯೋಜನೆಯಡಿ 90 ಲಕ್ಷ ರೂ. ವೆಚ್ಚದಲ್ಲಿ ರಟ್ಟಿಹಳ್ಳಿ ತಾಲೂಕಿನ ಹುಲ್ಲತ್ತಿ ಗ್ರಾಮದಲ್ಲಿ ಗ್ರಾಪಂ ವ್ಯಾಪ್ತಿಯಲ್ಲಿ 3. ಕೆಎಲ್ಡಿ ಸಾಮರ್ಥ್ಯದ ಮಲ ತ್ಯಾಜ್ಯ ನಿರ್ವಹಣಾ ಘಟಕ ನಿರ್ಮಾಣ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಅನುದಾನ ಮತ್ತು ಪರಿಹಾರ ಮಂಜೂರು ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹಾಗೂ ಸಚಿವ ಪ್ರಿಯಾಂಕಾ ಖರ್ಗೆ ಅವರಿಗೆ ಈ ಕ್ಷೇತ್ರದ ಜನತೆಯ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದರು.