ಶಿಗ್ಗಾಂವಿ ವಿಧಾನಸಭೆ ಕ್ಷೇತ್ರದಿಂದ ಗೆಲುವು ಸಾಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಅಹಮದ್ ಖಾನ್ ಪಠಾಣ ನಗರದ ಕಾಂಗ್ರೆಸ್ ಭವನಕ್ಕೆ ಭೇಟಿ ನೀಡಿದಾಗ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ಸನ್ಮಾನ ಮಾಡಿದರು. ಶಾಸಕ ಆಸ್ೀ ಸೇಠ್, ಕಾಂಗ್ರೆಸ್ ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷ ವಿನಯ ನಾವಲಗಟ್ಟಿ, ರಾಹುಲ್ ಜಾರಕಿಹೊಳಿ ಇತರರಿದ್ದರು. 
ಜಿಲ್ಲೆ

ಸಾಮಾನ್ಯ ಕಾರ್ಯಕರ್ತನನ್ನೂ ಗೆಲ್ಲಿಸಿದ್ದಕ್ಕೆ ಕೃತಜ್ಞ

ಬೆಳಗಾವಿ: ಉಪ ಚುನಾವಣೆಯಲ್ಲಿ ಶಿಗ್ಗಾಂವಿ ವಿಧಾನಸಭೆ ಕ್ಷೇತ್ರದಿಂದ ಗೆಲುವು ಸಾಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಅಹಮ್ಮದ್ ಖಾನ್ ಪಠಾಣ ನಗರದ ಕಾಂಗ್ರೆಸ್ ಭವನಕ್ಕೆ ಶನಿವಾರ ಆಗಮಿಸಿ, ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರನ್ನು ಭೇಟಿಯಾದರು. ಪಠಾಣ ಆಗಮಿಸುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಹರ್ಷ ವ್ಯಕ್ತಪಡಿಸಿ ಸನ್ಮಾನಿಸಿದರು. ಸನ್ಮಾನ ಸ್ವೀಕರಿಸಿದ ಪಠಾಣ, ಶಿಗ್ಗಾಂವಿ ಕ್ಷೇತ್ರದಲ್ಲಿ ನನ್ನಂಥ ಸಾಮಾನ್ಯ ಕಾರ್ಯಕರ್ತನನ್ನು ಸತೀಶ ಜಾರಕಿಹೊಳಿ ಅವರು ಗೆಲ್ಲಿಸಿದ್ದಾರೆ. ಅವರಿಗೆ ಸದಾ ಕೃತಜ್ಞನಾಗಿದ್ದೇನೆ ಎಂದರು. ಸತೀಶ ಜಾರಕಿಹೊಳಿ ಮಾತನಾಡಿ, ಸಾಮಾನ್ಯ ಕಾರ್ಯಕರ್ತ ಗೆದ್ದು ಇತಿಹಾಸ ನಿರ್ಮಿಸಿದ್ದಾರೆ. ಪಕ್ಷದ ಎಲ್ಲ ನಾಯಕರು, ಕಾರ್ಯಕರ್ತರಿಗೂ ಗೆಲುವಿನ ಶ್ರೇಯಸ್ಸು ಸಲ್ಲುತ್ತದೆ ಎಂದು ತಿಳಿಸಿದರು. 2028ರ ವಿಧಾನಸಭೆ ಚುನಾವಣೆಯಲ್ಲೂ ಗೆಲ್ಲುವ ದೃಷ್ಟಿಯಿಂದ ಎಲ್ಲ ಸಮುದಾಯದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಠಾಣ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು. ಶಾಸಕ ಆಸ್ೀ ಸೇಠ್, ಕಾಂಗ್ರೆಸ್ ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷ ವಿನಯ ನಾವಲಗಟ್ಟಿ, ರಾಹುಲ ಜಾರಕಿಹೊಳಿ ಇತರರಿದ್ದರು.