ಸರಗೂರು: ಪ್ರಪ್ರಥಮ ಬಾರಿಗೆ ಆಯೋಜಿಸಿದ್ದ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿದ್ದು, ಇದಕ್ಕೆ ಶ್ರಮಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುವೆ ಎಂದು ಶಾಸಕ ಅನಿಲ್ ಚಿಕ್ಕಮಾದು ಹೇಳಿದರು.
ಪಟ್ಟಣದ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ಕನ್ನಡ ಸಾಹಿತ್ಯ ಸಮ್ಮೇಳನದ ಸಮಿತಿ ವತಿಯಿಂದ ಆಯೋಜಿಸಿದ್ದ ಕೃತಜ್ಞತೆ ಸಭೆಯಲ್ಲಿ ಮಾತನಾಡಿದರು. ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಕಟ್ಟಿದ ಕನ್ನಡ ಸಾಹಿತ್ಯ ಪರಿಷತ್ತು ಇಂದು ರಾಜ್ಯಾದ್ಯಂತ ಹೆಮ್ಮರವಾಗಿ ಬೆಳೆದು ನಿಂತಿದೆ. ಸದಾ ಕನ್ನಡ ಕಟ್ಟುವ ಕೆಲಸದಲ್ಲಿ ನಿರಂತರವಾಗಿ ಸಾಹಿತ್ಯ ಪರಿಷತ್ತು ತಾಲೂಕು ಸಮ್ಮೇಳನ ಯಶಸ್ವಿಯಾಗಿ ಮಾಡಿದೆ ಎಂದರು.
ತಹಸೀಲ್ದಾರ್ ಮೋಹನಕುಮಾರಿ, ತಾಪಂ ಇಒ ಪ್ರೇಮ್ ಕುಮಾರ್, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಕೆಂಡಗಣ್ಣಸ್ವಾಮಿ,ಪಶುಸಂಗೋಪನಾ ಇಲಾಖೆ ಸಹಾಯಕ ನಿರ್ದೇಶಕ ವೈ.ಡಿ.ರಾಜಣ್ಣ, ಜಿಪಂ ಮಾಜಿ ಸದಸ್ಯ ಪಿ.ರವಿ, ಪಪಂ ಅಧ್ಯಕ್ಷೆ ರಾಧಿಕಾ ಶ್ರೀನಾಥ್, ಸದಸ್ಯರಾದ ಶ್ರೀನಿವಾಸ, ಚಲುವಕೃಷ್ಣ, ತಾಪಂ ಮಾಜಿ ಸದಸ್ಯ ಸಿ.ಕೆ.ಗಿರೀಶ್, ಪಪಂ ಮುಖ್ಯಾಧಿಕಾರಿ ಎಸ್.ಕೆ.ಸಂತೋಷ ಕುಮಾರ್, ಆರೋಗ್ಯಾಧಿಕಾರಿ ಟಿ.ರವಿಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಕಾಂತರಾಜ್, ಎಚ್.ಡಿ.ಕೋಟೆ ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಕನ್ನಡ ಪ್ರಮೋದ್, ನರೇಗಾ ಯೋಜನಾಧಿಕಾರಿ ಮಹದೇವಸ್ವಾಮಿ, ಪ್ರಧಾನ ಕಾರ್ಯದರ್ಶಿ ನಿಂಗರಾಜು, ಗ್ರಾಮೀಣ ಮಹೇಶ್, ಅಕ್ರಮ ಸಕ್ರಮ ಸಮಿತಿ ಸದಸ್ಯ ಶಿವಶಂಕರ್, ಎಪಿಎಂಸಿ ಕಾರ್ಯದರ್ಶಿ ಕೃಷ್ಣಮೂರ್ತಿ, ವಸಂತ್ ಕುಮಾರ್, ಈಡಿಗ ಸಮಾಜದ ತಾಲೂಕು ಅಧ್ಯಕ್ಷ ಎಸ್.ಎನ್.ನಾಗರಾಜು, ಮುಖಂಡರು ವಾಹನ ಚಾಲಕರ ಸಂಘದ ಅಧ್ಯಕ್ಷ ಬಿರ್ವಾಳ್ ಚಿಕ್ಕಣ್ಣ, ಸುಭಾನ್ ಭೋವಿ ಸಮಾಜದ ಮುಖಂಡ ರಮೇಶ್ ಇತರರು ಹಾಜರಿದ್ದರು.