ಜಿಲ್ಲೆ

ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ ; ಜಂಟಿ ಪರಿಶೀಲನಾ ಸಮಿತಿ ಅವಧಿ ವಿಸ್ತರಣೆ|Greater Bangalore Administration Bill

ಬೆಂಗಳೂರು: ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ(2024)ವನ್ನು ಸಮಗ್ರವಾಗಿ ಪರಿಶೀಲಿಸಿ ವರದಿ ನೀಡಲು ರಚಿಸಲಾಗಿರುವ ಕರ್ನಾಟಕ ವಿಧಾನ ಮಂಡಲದ ಜಂಟಿ ಪರಿಶೀಲನಾ ಸಮಿತಿ ಅವಧಿ(Greater Bangalore Administration Bill; Extension of Joint Review Committee Term)ಯನ್ನು ಮೂರು ತಿಂಗಳು ವಿಸ್ತರಿಸಲಾಗಿದೆ.

ಶರವೇಗದಲ್ಲಿ ಬೆಳೆಯುತ್ತಿರುವ ಬೆಂಗಳೂರು ಆಡಳಿತ ನಿರ್ವಹಣೆಗೆ ಮೂರು ಹಂತದ ವ್ಯವಸ್ಥೆ, 10 ನಗರ ಪಾಲಿಕೆಗಳನ್ನಾಗಿ ಪುನರ್ ರಚನೆ, 400 ವಾರ್ಡ್‌ವರೆಗೆ ವಿಂಗಡಣೆ ಉದ್ದೇಶವನ್ನು ವಿಧೇಯಕ ಹೊಂದಿದೆ.

ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಬಿ.ಎಸ್.ಪಾಟೀಲರ(B S Patil)ಅಧ್ಯಕ್ಷತೆಯಲ್ಲಿ ಗ್ರೇಟರ್ ಬೆಂಗಳೂರು ಆಡಳಿತದ ಕರಡು ವಿಧೇಯಕವನ್ನು ಸಿದ್ಧಪಡಿಸಿ, ಡಿಸಿಎಂ ಡಿ.ಕೆ.ಶಿವಕುಮಾರ್(D K  Shivakumar)ಅವರಿಗೆ ಸಲ್ಲಿಕೆ ಮಾಡಲಾಗಿತ್ತು. ಈ ವಿಧೇಯದ ಪರಿಶೀಲನೆಗೆ ವಿಧಾನಮಂಡಲ ಜಂಟಿ ಪರಿಶೀಲನಾ ಸಮಿತಿ ರಚಿಸಲಾಗಿದ್ದು, ಶಾಸಕ ರಿಜ್ವಾನ್ ಅರ್ಷದ್ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಈ ಸಮಿತಿ ಈಗಾಗಲೇ ಐದಾರು ಬಾರಿ ಸಭೆ ನಡೆಸಿದೆ. ಹೆಚ್ಚಿನ ಮಾಹಿತಿ ಸಂಗ್ರಹಿಸಬೇಕಾಗಿರುವ ಹಿನ್ನೆಲೆಯಲ್ಲಿ ಅವಧಿ ವಿಸ್ತರಿಸುವಂತೆ ಸಮಿತಿ ಪ್ರಸ್ತಾವನೆ ಸಲ್ಲಿಸಿತ್ತು. ಈ ಹಿನ್ನೆಲೆಯಲ್ಲಿ ಇನ್ನೂ ಮೂರು ತಿಂಗಳು ಅಂದರೆ ೆಬ್ರವರಿ 21,2025ರ ವರೆಗೆ ವಿಸ್ತರಿಸಿ ವಿಧಾನಸಭೆ ಸ್ಪೀಕರ್ ಆದೇಶಿಸಿದ್ದಾರೆ.