ಬೆಳಗಾವಿ: ಪೊಲೀಸರೊಂದಿಗೆ ಜನರು ಮುಕ್ತವಾಗಿ ಸಮಸ್ಯೆ ಹಂಚಿಕೊಳ್ಳಬೇಕು. ಇದಷ್ಟೇ ಅಲ್ಲದೇ ಮಾಹಿತಿ, ಸಲಹೆ ಸೂಚನೆ ನೀಡಬಹುದು ಎಂದು ನಗರ ಪೊಲೀಸ್ ಆಯುಕ್ತ ಭೂಷಣ ಗುಲಾಬರಾವ್ ಬೋರಸೆ ಹೇಳಿದರು.
ನಗರದ ವಾರ್ತಾ ಭವನದಲ್ಲಿ ಬುಧವಾರ ಬೆಳಗಾವಿ ಪತ್ರಕರ್ತರ ಸಂ ಹಮ್ಮಿಕೊಂಡಿದ್ದ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, ಕಾನೂನು ಸುವ್ಯವಸ್ಥೆ ಕಾಪಾಡಲು, ಅಪರಾಧ ಪ್ರಕರಣಗಳ ನಿಯಂತ್ರಣ ಹಾಗೂ ಜನಸ್ನೇಹಿ ಆಡಳಿತ ನಡೆಸುವ ನಿಟ್ಟಿನಲ್ಲಿ ಮನೆಮನೆಗೆ ಪೊಲೀಸ್ ಕಾರ್ಯಕ್ರಮ ಅನುಷ್ಠಾನಗೊಳಿಸಲಾಗಿದೆ. ಎಲ್ಲ ವಲಯಗಳಲ್ಲಿಂದು ಮಾಹಿತಿ ತಂತ್ರಜ್ಞಾನ ವೇಗವಾಗಿ ಬೆಳೆಯುತ್ತಿರುವ ಹಿನ್ನೆಲೆಯಲ್ಲಿ ಸೈಬರ್ ಕೆಮ್ಗಳ ನಿಯಂತ್ರಣ ಸಾಧ್ಯವಿಲ್ಲ. ಹೀಗಾಗಿ ಜನರೇ ಸ್ವಯಂಜಾಗೃತರಾಗುವುದು ಸೂಕ್ತ. ಭವಿಷ್ಯದಲ್ಲಿ ಸೈಬರ್ ಕೆಮ್ ಸಂಖ್ಯೆ ಹೆಚ್ಚಾಗುತ್ತದೆ. ವಿನ@ ಕಡಿಮೆಯಾಗುವುದಿಲ್ಲ. ಪೊಲೀಸ್ ಸಿಬ್ಬಂದಿಗೆ ತಂತ್ರಜ್ಞಾನಕ್ಕೆ ತಕ್ಕಂತೆ ತರಬೇತಿ ನೀಡಿ ಸಜ್ಜುಗೊಳಿಸಬೇಕಾಗುತ್ತದೆ. ನಗರದಲ್ಲಿ ಪಾಲಕರು ಮತ್ತು ಮಕ್ಕಳ ನಡುವೆ ಸಮನ್ವತೆ ಕೊರತೆ ಹೆಚ್ಚಾಗುತ್ತಿದೆ. ಇದರಿಂದ ಅಪರಾಧ ಪ್ರಕರಣಗಳು ಹೆಚ್ಚುತ್ತಿದ್ದು, ಸ್ಲಂ ಪ್ರದೇಶಗಳ ಮೇಲೆ ಹೆಚ್ಚು ನಿಗಾ ವಹಿಸಲಾಗುತ್ತಿದೆ ಎಂದರು.
ನಗರದ ಸಂಚಾರ ದಟ್ಟಣೆ ಸಮಸ್ಯೆಗೆ ಶಾಶ್ವತ ಪರಿಹಾರಕ್ಕಾಗಿ ಸಂಚಾರ ಪೊಲೀಸ್ ಸಿಬ್ಬಂದಿಗೆ ತರಬೇತಿ ನೀಡಲಾಗುತ್ತಿದೆ. ನಿತ್ಯ 4ಸಾವಿರ ಟ್ರಕ್, 250ಕ್ಕೂ ಅಧಿಕ ಸಾರಿಗೆ ಬಸ್ಗಳು ಸಂಚಾರ ನಡೆಸುತ್ತಿವೆ. ಇವುಗಳಿಗೆ ಪರ್ಯಾಯ ಮಾರ್ಗ ರೂಪಿಸುತ್ತಿದ್ದು, ಪಾಲಿಕೆ ಆಯುಕ್ತರು, ದಂಡು ಮಂಡಳಿ ಆಯುಕ್ತರು, ರಾಷ್ಟ್ರೀಯ, ರಾಜ್ಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಪತ್ರ ಬರೆದು ಚರ್ಚಿಸಲಾಗಿದೆ. ನಗರದಲ್ಲಿನ ಸಮಸ್ಯೆಗಳ ಕುರಿತು ಮುಕ್ತವಾಗಿ ಚರ್ಚಿಸಲು, ಸಲಹೆ ನೀಡಲು " ನನ್ನ ಬೆಳಗಾವಿಗೆ ನನ್ನ ಸಲಹೆಗಳು' ಎಂಬ ವಿಶೇಷ ವೆಬ್ಸೈಟ್ ಆರಂಭಿಸಲಾಗಿದೆ ಎಂದು ಹೇಳಿದರು.