ಪರಿಸರಸ್ನೇಹಿ ಹಸಿರು ಜೀವ ಅಭಿಯಾನ ಸಮಾರೋಪದಲ್ಲಿ ಉಡುಪಿ ಜಿಪಂ ಮಾಜಿ ಸದಸ್ಯ ಗಣಪತಿ ಟಿ.ಶ್ರೀಯಾನ್ ಗಿಡ ವಿತರಿಸಿದರು 
ಜಿಲ್ಲೆ

ಸಂಘ-ಸಂಸ್ಥೆ ಮುನ್ನಡೆಸುವುದು ಕ್ಲಿಷ್ಟಕರ

ಇಂದಿರಾ ಎನ್ ಕೆ

ಕೋಟ: ಸಂಘ-ಸಂಸ್ಥೆ ಕಟ್ಟುವುದು ಸುಲಭ ಆದರೆ ಮುನ್ನಡೆಸುವ ಕಾರ್ಯ ಕ್ಲಿಷ್ಟಕರ. ಕೋಟ ಪಂಚವರ್ಣ ಸಂಸ್ಥೆ ನಿರಂತರ ಸಾಮಾಜಿಕ ಕಾರ್ಯ ಅತ್ಯಂತ ಪ್ರಶಂಸನೀಯ ಎಂದು ಉಡುಪಿ ಜಿಪಂ ಮಾಜಿ ಸದಸ್ಯ ಗಣಪತಿ ಟಿ.ಶ್ರೀಯಾನ್ ಹೇಳಿದರು.

ಭಾನುವಾರ ತೆಕ್ಕಟ್ಟೆ ಬಾರಾಳಿಬೆಟ್ಟು ಪರಿಸರದಲ್ಲಿ ಕೋಟದ ಪಂಚವರ್ಣ ಯುವಕ ಮಂಡಲ, ಮಹಿಳಾ ಮಂಡಲ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಸುವರ್ಣ ಎಂಟರ್‌ಪ್ರೈಸಸ್ ಬ್ರಹ್ಮಾವರ, ಮಣೂರು ಫ್ರೆಂಡ್ಸ್, ಹಂದಟ್ಟು ಮಹಿಳಾ ಬಳಗ ಕೋಟ, ಸಮುದ್ಯತಾ ಗ್ರೂಪ್ಸ್ ಕೋಟ, ಎಸ್‌ಸಿಐ ಕೋಟ ಲಿಜನ್ ಸಹಯೋಗದೊಂದಿಗೆ ತೆಕ್ಕಟ್ಟೆ ಗ್ರಾಪಂ ಎಸ್‌ಎಲ್‌ಆರ್‌ಎಂ ಘಟಕ ಸಂಯೋಜನೆಯೊಂದಿಗೆ ಪರಿಸರಸ್ನೇಹಿ ಹಸಿರುಜೀವ ಅಭಿಯಾನ ಸಮಾರೋಪದಲ್ಲಿ ಮಾತನಾಡಿದರು.

ತೆಕ್ಕಟ್ಟೆ ಗ್ರಾಪಂ ಅಧ್ಯಕ್ಷೆ ಶೋಭನಾ ಗಿಡ ವಿತರಿಸಿದರು. ಪಂಚವರ್ಣ ಯುವಕ ಮಂಡಲ ಅಧ್ಯಕ್ಷ ಅಜಿತ್ ಆಚಾರ್ ಅಧ್ಯಕ್ಷತೆ ವಹಿಸಿದ್ದರು. ತೆಕ್ಕಟ್ಟೆ ಗ್ರಾಪಂ ಎಸ್‌ಎಲ್‌ಆರ್‌ಎಂ ಘಟಕ ಮುಖ್ಯಸ್ಥೆ ರೇವತಿ ತೆಕ್ಕಟ್ಟೆ, ಸ್ಥಳೀಯ ಅಂಗನವಾಡಿ ಕಾರ್ಯಕರ್ತೆ ಸುಗುಣಾ, ಕೆನರಾ ಬ್ಯಾಂಕ್ ಸಿಬ್ಬಂದಿ ರಾಮ ದೇವಾಡಿಗ, ಧಾರ್ಮಿಕ ಚಿಂತಕ ರಾಮ ಪೂಜಾರಿ, ಕುಂದಾಪುರ ಅಂಚೆ ಕಚೇರಿ ಅಂಚೆ ಸಹಾಯಕ ಸುರೇಶ್ ದೇವಾಡಿಗ, ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ಉಪಸ್ಥಿತರಿದ್ದರು. ಮಹಿಳಾ ಮಂಡಲ ಸಂಚಾಲಕಿ ಸುಜಾತ ಎಂ.ಬಾಯರಿ ನಿರೂಪಿಸಿದರು. ಪಂಚವರ್ಣ ಕಾರ್ಯಾಧ್ಯಕ್ಷ ರವೀಂದ್ರ ಕೋಟ ಸಂಯೋಜಿಸಿದರು.