ಕೋಟ: ಪ್ರತಿಯೊಬ್ಬರು ಪ್ರಕೃತಿಯನ್ನು ಆರಾಧಿಸುವ ಮನಸ್ಥಿತಿ ಸೃಷ್ಟಿಸಿಕೊಂಡರೆ ಪ್ರಕೃತಿ ತಾನಾಗಿಯೇ ಉಳಿಯುತ್ತದೆ. ಇದರೊಂದಿಗೆ ಮನುಕುಲಕ್ಕೆ ಆರೋಗ್ಯಕರ ವಾತಾವರಣ ಸಿಗಲು ಸಾಧ್ಯ ಎಂದು ಪರಿಸರಪ್ರೇಮಿ ರಕ್ತದಾನಿ ಕೆ.ರಾಘವ ನಾಯಕ್ ಹೇಳಿದರು. ಮಣೂರು ಹಾಲು ಉತ್ಪಾದಕರ ಸಹಕಾರ ಸಂಘ ವಠಾರದಲ್ಲಿ ಕೋಟ ಪಂಚವರ್ಣ ಯುವಕ ಮಂಡಲ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಸುವರ್ಣ ಎಂಟರ್ ಪ್ರೈಸಸ್ ಬ್ರಹ್ಮಾವರ, ಮಣೂರು ಫ್ರೆಂಡ್ಸ್, ವಿಪ್ರ ಮಹಿಳಾ ಬಳಗ ಸಾಲಿಗ್ರಾಮ, ಹಂದಟ್ಟು ಮಹಿಳಾ ಬಳಗ ಕೋಟ, ಸಮುದ್ಯತಾ ಗ್ರೂಪ್ಸ್ ಕೋಟ, ಸಿನಿಯರ್ ಜೆಸಿಐ ಕೋಟ ಸಹಯೋಗದೊಂದಿಗೆ ಹಾಲು ಉತ್ಪಾದಕರ ಸಹಕಾರ ಸಂಘ ಮಣೂರು ಸಂಯೋಜನೆಯೊಂದಿಗೆ 215ನೇ ಪರಿಸರಸ್ನೇಹಿ ಭಾನುವಾರದ ಹಸಿರು ಜೀವ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಶಿಕ್ಷಣ ತಜ್ಞ ಎಂ.ಎನ್.ಮಧ್ಯಸ್ಥ ಸ್ಥಳೀಯರಿಗೆ ಗಿಡ ನೀಡಿ ಪರಿಸರ ಜಾಗೃತಿ ಸಂದೇಶ ಸಾರಿದರು. ಮಣೂರು ರಾಷ್ಟ್ರೀಯ ಹೆದ್ದಾರಿ ಕೆಲ ಭಾಗಗಳಲ್ಲಿ ಗಿಡನೆಡಲಾಯಿತು. ಪಂಚವರ್ಣ ಯುವಕ ಮಂಡಲ ಸಂಚಾಲಕ ಅಮೃತ್ ಜೋಗಿ ಅಧ್ಯಕ್ಷತೆ ವಹಿಸಿದ್ದರು. ಮಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ಸತೀಶ್ ಎಚ್.ಕುಂದರ್, ಮುಖ್ಯ ಅಭ್ಯಾಗತರಾಗಿ ಹಾಲು ಉತ್ಪಾದಕರ ಸಹಕಾರ ಸಂಘ ಮಣೂರು ಅಧ್ಯಕ್ಷ ಪ್ರವೀಣ್ ಶೆಟ್ಟಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ಹರ್ಷ ಪೂಜಾರಿ, ಪಂಚವರ್ಣ ಮಹಿಳಾ ಮಂಡಲ ಅಧ್ಯಕ್ಷೆ ಲಲಿತಾ ಪೂಜಾರಿ, ಮಣೂರು ಫ್ರೆಂಡ್ಸ್ ಪೂರ್ವಾಧ್ಯಕ್ಷ ದಿನೇಶ್ ಆಚಾರ್, ಪಂಚವರ್ಣ ಮಹಿಳಾ ಮಂಡಲ ಗೌರವಾಧ್ಯಕ್ಷೆ ಕುಸುಮಾ ದೇವಾಡಿಗ, ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್, ಸಿನಿಯರ್ ಜೆಸಿಐ ಕೋಟ ಅಧ್ಯಕ್ಷ ಕೇಶವ ಆಚಾರ್ ಕೋಟ ಮತ್ತಿತರರು ಉಪಸ್ಥಿತರಿದ್ದರು. ಪಂಚವರ್ಣ ಮಹಿಳಾ ಮಂಡಲ ಸಂಚಾಲಕಿ ಸುಜಾತಾ ಬಾಯರಿ ನಿರೂಪಿಸಿದರು. ಕಾರ್ಯಾಧ್ಯಕ್ಷ ರವೀಂದ್ರ ಕೋಟ ಸಂಯೋಜಿಸಿದರು.