ಜಿಲ್ಲೆ

ಲೋಡ್ ಶೆಡ್ಡಿಂಗ್ ವಿರೋಧಿಸಿ ಗ್ರಿಡ್‌ಗೆ ಮುತ್ತಿಗೆ; ನರೇಂದ್ರ ಗ್ರಾಮಸ್ಥರಿಂದ ಅಹೋರಾತ್ರಿ ಧರಣಿ

ಮಂಜುನಾಥ ಅಂಗಡಿ

ಧಾರವಾಡ: ರೈತರ ಪಂಪ್‌ಸೆಟ್‌ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆಯÁಗುತ್ತಿಲ್ಲ ಎಂದು ಆರೋಪಿಸಿ ತಾಲೂಕಿನ ನರೇಂದ್ರ ಗ್ರಾಮದ ರೈತರು ಇಲ್ಲಿನ ಕೃಷಿ ವಿಶ್ವವಿದ್ಯಾಲಯ ಬಳಿಯ ವಿದ್ಯುತ್ ವಿತರಣಾ ಕೇಂದ್ರಕ್ಕೆ ಮಂಗಳವಾರ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಸ್ಥಳದಲ್ಲೇ ಅಡುಗೆ ತಯಾರಿಸಿ ಅಹೋರಾತ್ರಿ ಧರಣಿ ಮುಂದುವರಿಸಿದ್ದಾರೆ.
ಮಳೆ ಕೈಕೊಟ್ಟಿರುವುದರಿಂದ ರೈತರು ನೀರಾವರಿಗಾಗಿ ಪಂಪ್‌ಸೆಟ್‌ಗಳನ್ನು ಅವಲಂಭಿಸಿದ್ದಾರೆ. ಆದರೆ ಸಪರ್ಪಕ ವಿದ್ಯುತ್ ಪೂರೈಕೆಯÁಗುತ್ತಿಲ್ಲ. ಈ ಬಗ್ಗೆ ಹೆಸ್ಕಾಂ ಅಽಕಾರಿಗಳಿಗೆ ಬಿಸಿ ಮುಟ್ಟಿಸಲು ನಿರ್ಧರಿಸಿದ ರೈತರು ಎತ್ತು, ಚಕ್ಕಡಿ ಸಮೇತ ವಿದ್ಯುತ್ ವಿತರಣಾ ಕೇಂದ್ರಕ್ಕೆ ಮುತ್ತಿಗೆ ಹಾಕಿದರು.
ಮೊದಲು ೭ ಗಂಟೆ ವಿದ್ಯುತ್ ವಿತರಣೆಯÁಗುತ್ತಿತ್ತು. ಆದರೆ, ಈಗ ಕೇವಲ ೩ ತಾಸು ಮÁತ್ರ ವಿದ್ಯುತ್ ವಿತರಣೆ ಮÁಡಲಾಗುತ್ತಿದೆ. ಬೆಳೆಗಳಿಗೆ ನೀರು ಹಾಯಿಸಲು ನಿರಂತರ ತ್ರಿಫೇಸ್ ವಿದ್ಯುತ್ ನೀಡಬೇಕು ಎಂದು ಒತ್ತಾಯಿಸಿದರು. ಮುನ್ನೆಚ್ಚರಿಕೆ ಕ್ರಮವಾಗಿ ಕೇಂದ್ರಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿತ್ತು. ಗ್ರಿಡ್ ಎದುರಿನ ಧಾರವಾಡ- ಬೆಳಗಾವಿ ರಸ್ತೆಯಲ್ಲಿ ಚಕ್ಕಡಿ ನಿಲ್ಲಿಸಿ ಕೆಲಹೊತ್ತು ರಸ್ತೆ ತಡೆ ನಡೆಸಿದರು.
ನಾಗೇಶ ಹೊಟ್ಟಿಹೊಳಿ, ಚನ್ನವೀರಗೌಡ ಪಾಟೀಲ, ಶಂಕರ ಕೋಮಾರದೇಸಾಯಿ, ಮಂಜುನಾಥ ಈಳಿಗೇರ, ಈರಪ್ಪ ಗಂಟಿ, ಸುದತ್ತ ಮುತಾಲಿಕ ದೇಸಾಯಿ, ಈರಪ್ಪ ಗಾಣಿಗೇರ, ಚನಮಲ್ಲಪ್ಪ ಮೊರಬ, ಸಿದ್ದನಗೌಡ ಪಾಟೀಲ, ಅಪ್ಪಣ್ಣ ಹಡಪದ, ಬಸವರಾಜ ಸೋಗಿ ಹಾಗೂ ಗ್ರಾಮಸ್ಥರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.