ಜಿಲ್ಲೆ

ಕುಂದುಕೊರತೆ ಸಭೆ ನಾಳೆ

ರುದ್ರಪ್ಪ ವಾಲಿ

ಮಸ್ಕಿ: ಪಟ್ಟಣದ ತಾಲೂಕು ಕಚೇರಿಯಲ್ಲಿ ಫೆ.14 ರಂದು ಲೋಕಾಯುಕ್ತ ಎಸ್ಪಿ ನೇತೃತ್ವದಲ್ಲಿ ಸಾರ್ವಜನಿಕರ ಕುಂದು ಕೊರತೆ ಸಭೆ ಆಯೋಜಿಸಲಾಗಿದೆ. ಕಚೇರಿಗಳಲ್ಲಿ ಸಾರ್ವಜನಿಕ ಸೇವೆ ವಿಳಂಬ, ಹಣದ ಬೇಡಿಕೆ ಸೇರಿ ಇತರ ವಿಷಯಗಳ ಕುರಿತು ಸಭೆಯಲ್ಲಿ ದೂರು ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.