ಮಾನ್ವಿ ತಾಲೂಕಿನ ಅರೋಲಿ ಗ್ರಾಮದಲ್ಲಿ ಶನಿವಾರ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿ ಮಹಿಳೆಗೆ ಗ್ರೇಡ್-2 ತಹಸೀಲ್ದಾರ್ ಅಬ್ದುಲ್ ವಾಹಿದ್ ಮಂಜೂರಾತಿ ಪ್ರಮಾಣ ಪತ್ರ ವಿತರಿಸಿದರು. ಕಂದಾಯ ನಿರೀಕ್ಷಕ ಮಹೇಶ್ ಪಾಟೀಲ್ ಇದ್ದರು. 
ಜಿಲ್ಲೆ

ಗೃಹಲಕ್ಷ್ಮೀ ಯೋಜನೆ ಸದುಪಯೋಗ ಪಡೆದುಕೊಳ್ಳಿ

Gangavati - Desk - Veeresh S Ullagaddi

ಮಾನ್ವಿ: ತಾಲೂಕಿನ ವಿವಿಧ ಗ್ರಾಮಗಳಲ್ಲಿ 16 ಗ್ರಾಮ ಒನ್ ಕೇಂದ್ರಗಳಲ್ಲಿ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಮಹಿಳೆಯರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಗ್ರೇಡ್-2 ತಹಸೀಲ್ದಾರ್ ಅಬ್ದುಲ್ ವಾಹಿದ್ ಹೇಳಿದರು.


ತಾಲೂಕಿನ ಅರೋಲಿ ಗ್ರಾಪಯ ಬಾಪೂಜಿ ಕೇಂದ್ರದಲ್ಲಿ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಿದ ಮಹಿಳೆಗೆ ಮಂಜೂರಾತಿ ಪ್ರಮಾಣ ಪತ್ರ ನೀಡಿ ಶನಿವಾರ ಮಾತನಾಡಿದರು.

ಇದನ್ನೂ ಓದಿ: ಗೃಹಲಕ್ಷ್ಮೀ ಯೋಜನೆ ಸ್ತ್ರೀ ಸಬಲೀಕರಣಕ್ಕೆ ಪೂರಕ : ಸಚಿವ ಬಿ.ನಾಗೇಂದ್ರ ಹೇಳಿಕೆ
ನಿತ್ಯ 60 ಅರ್ಜಿ ಎಂಟ್ರಿ ಮಾಡಲು ಗುರಿಯನ್ನು ನಿಗದಿಗೊಳ್ಳಿಸಲಾಗಿದ್ದು, ಅಗತ್ಯವಿದ್ದಲ್ಲಿ ಇನ್ನೂ 15 ಗ್ರಾಮ ಒನ್ ಕೇಂದ್ರಗಳಿಗೆ ಮಂಜೂರಾತಿ ನೀಡಲು ಪರಿಶೀಲಿಸಲಾಗುತ್ತದೆ. ಗ್ರಾಮ ಆಡಳಿತ ಅಧಿಕಾರಿಗಳು ಹಾಗೂ ಕಂದಯ ನಿರೀಕ್ಷಕರು, ಉಪ ತಹಸೀಲ್ದಾರ್, ತಮ್ಮ ವ್ಯಾಪ್ತಿಯಲ್ಲಿ ಬರುವ ಗ್ರಾಮ ಒನ್ ಕೇಂದ್ರಗಳಲ್ಲಿ ಪ್ರಗತಿ ಪರಿಶೀಲಿಸಿ ವರದಿ ನೀಡಲು ಸೂಚನೆ ನೀಡಲಾಗಿದೆ ಎಂದರು.


ಸಾರ್ವಜನಿಕರು ಪಡಿತರ ಚೀಟಿ ಸಂಖ್ಯೆಯನ್ನು 8147500500 ನಂಬರ್‌ಗೆ ಸಂದೇಶ ಕಳುಹಿಸುವ ಮೂಲಕ ತಮ್ಮ ಅರ್ಜಿ ಸಲ್ಲಿಸುವ ಸ್ಥಳ ಹಾಗೂ ದಿನಾಂಕ ಮತ್ತು ಸಮಯದ ಮಾಹಿತಿಯನ್ನು ಪಡೆಯಬೇಕು ಎಂದರು. ಕಂದಾಯ ನಿರೀಕ್ಷಕ ಮಹೇಶ್ ಪಾಟೀಲ್ ಇತರರಿದ್ದರು.