ಜಿಲ್ಲೆ

ಚಿಕ್ಕನರಗುಂದದಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ

ನರಗುಂದ: ತಾಲೂಕಿನ ಚಿಕ್ಕನರಗುಂದ ಗ್ರಾಪಂ ಕಾರ್ಯಾಲಯದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಗೃಹಲಕ್ಷ್ಮಿ ಯೋಜನೆಗೆ ತಾಪಂ ಇಒ ಹಾಗೂ ಗೃಹಲಕ್ಷ್ಮಿ ನೋಡಲ್ ಅಧಿಕಾರಿ ಮಂಜುಳಾ ಹಕಾರಿ ಚಾಲನೆ ನೀಡಿದರು.


ಕುಟುಂಬದ ಯಜಮಾನಿಗೆ ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ಎರಡು ಸಾವಿರ ರೂಪಾಯಿ ಜಮೆ ಆಗುತ್ತದೆ. ಈ ಮಹತ್ವದ ಯೋಜನೆ ನಮ್ಮೆಲ್ಲರಿಗಾಗಿ ಜಾರಿಗೊಳಿಸಲಾಗಿದೆ. ಮಹಿಳೆಯರು ಈ ಹಣದಲ್ಲಿ ಮಕ್ಕಳ ವಿದ್ಯಾಭ್ಯಾಸ, ಕುಟುಂಬದ ನಿರ್ವಹಣೆಗೆ ಬಳಸಿಕೊಳ್ಳುವುದರಿಂದ ಸಾಕಷ್ಟು ಅನುಕೂಲಕರವಾಗಲಿದೆ ಎಂದು ತಿಳಿಸಿದರು.


ಗ್ರಾಪಂ ಅಧ್ಯಕ್ಷೆ ಮಲ್ಲಮ್ಮ ಮರೆಣ್ಣವರ ಮಾತನಾಡಿ, ಸರ್ಕಾರದ ಸೌಲಭ್ಯಗಳನ್ನು ಒಳ್ಳೆಯ ಕೆಲಸಕ್ಕೆ ಬಳಸಿಕೊಂಡು ಉತ್ತಮ ಜೀವನ ಸಾಗಿಸಬೇಕು ಎಂದು ತಿಳಿಸಿದರು.


ಗ್ರಾಪಂ ಉಪಾಧ್ಯಕ್ಷೆ ಈರಮ್ಮ ಮುದಿಗೌಡ್ರ, ಮಾಜಿ ಅಧ್ಯಕ್ಷ ಮುತ್ತು ರಾಯರಡ್ಡಿ, ಲಕ್ಷ್ಮಣ ಕಂಬಳಿ, ಬಾಪುಗೌಡ ಹಿರೇಗೌಡ್ರ, ಸದಸ್ಯರಾದ ಶರಣಬಸಪ್ಪ ಹಳೇಮನಿ, ಜಡಿಯಪ್ಪಗೌಡ್ರ ಚನ್ನಪ್ಪಗೌಡ್ರ, ಶ್ರುತಿ ಬ್ಯಾಳಿ, ನಿರ್ಮಲಾ ತಳವಾರ, ಗ್ರಾಪಂ ಅಭಿವೃದ್ಧಿ ಅಧಿಕಾರಿ ಶೈನಾಜ್ ಮುಜಾವರ, ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರು, ಗ್ರಾಪಂ ಅಧಿಕಾರಿ, ಸಿಬ್ಬಂದಿ ವರ್ಗ ಹಾಗೂ 500ಕ್ಕೂ ಹೆಚ್ಚು ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳು ಇದ್ದರು.