ಜಿಲ್ಲೆ

ರಟ್ಟಿಹಳ್ಳಿ ತಾಲೂಕಿನ 19 ಗ್ರಾಮ ಪಂಚಾಯಿತಿಯಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ಆ. 30ರಂದು

ರಟ್ಟಿಹಳ್ಳಿ: ಗೃಹಲಕ್ಷ್ಮಿ ಯೋಜನೆಯ ಉದ್ಘಾಟನಾ ಸಮಾರಂಭಕ್ಕೆ ತಾಲೂಕಿನ 19 ಗ್ರಾಮ ಪಂಚಾಯಿತಿಯಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಟಿ. ಆರ್. ಮಲ್ಲಾಡದ ಹೇಳಿದರು.

ಪಟ್ಟಣದ ತಾಪಂ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಆ. 30ರಂದು ಗೃಹಲಕ್ಷ್ಮಿ ಯೋಜನೆಯ ರಾಜ್ಯಮಟ್ಟದ ಉದ್ಘಾಟನೆ ಸಮಾರಂಭ ಮೈಸೂರಿನಲ್ಲಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಮಟ್ಟದ ಕಾರ್ಯಕ್ರಮ ವೀಕ್ಷಣೆಗೆ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಭಾಭವನ, ಕಲ್ಯಾಣ ಮಂಟಪ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಬೃಹತ್ ಎಲ್​ಇಡಿ ಪರದೆ, ಟಿವಿಗಳ ವ್ಯವಸ್ಥೆ ಮಾಡಲಾಗಿದೆ. ಸ್ಥಳೀಯ ಜನಪ್ರತಿನಿಧಿಗಳಿಂದ ಯೋಜನೆಗೆ ಚಾಲನೆ ನೀಡುವ ಕಾರ್ಯಕ್ರಮ ನಡೆಯಲಿದೆ ಎಂದರು.

ಈಗಾಗಲೇ ಯೋಜನೆಯ ಪಲಾನುಭವಿಗಳಿಗೆ ಆಮಂತ್ರಣ ಪತ್ರಿಕೆ ನೀಡಲಾಗಿದೆ. ಆ. 30ರಂದು ಮಧ್ಯಾಹ್ನ 12 ಗಂಟೆಯಿಂದ 2 ಗಂಟೆ ವರೆಗೆ ನಡೆಯಲಿದೆ. ಗ್ರಾ.ಪಂ. ವ್ಯಾಪ್ತಿಯ ಗೃಹಲಕ್ಷ್ಮಿ ಫಲಾನುಭವಿಗಳು ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ತಿಳಿಸಿದರು.