ಧಾರವಾಡ: ರಾಜ್ಯ ಸರ್ಕಾರವು ಗ್ಯಾರಂಟಿ ಯೋಜನೆಗಳ ಹೊಸ ಕಲ್ಪನೆಯೊಂದಿಗೆ ಜಾರಿಗೊಳಿಸುತ್ತಿರುವ ಐತಿಹಾಸಿಕ ಯೋಜನೆಗಳು ರಾಷ್ಟ್ರದ ಗಮನ ಸೆಳೆದಿವೆ. ಶಕ್ತಿ, ಅನ್ನಭಾಗ್ಯ, ಗೃಹಜ್ಯೋತಿ ಮತ್ತು ಗೃಹಲಕ್ಷ್ಮೀ ಯೋಜನೆಗಳ ಮೂಲಕ ರಾಜ್ಯದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಹೇಳಿದರು.
ಜಿಲ್ಲಾಡಳಿತ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲೂಕಿನ ಹೆಬ್ಬಳ್ಳಿ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ಗೃಹಲಕ್ಷ್ಮೀ ಯೋಜನೆಗೆ ಬುಧವಾರ ಚಾಲನೆ ನೀಡಿ ಅವರು ಮಾತನಾಡಿದರು.
ರಾಜ್ಯ ಸರ್ಕಾರವು ನುಡಿದಂತೆ ನಡೆಯುತ್ತಿದೆ. ಚುನಾವಣಾ ಪೂರ್ವ ಮತದಾರರಿಗೆ ನೀಡದ್ದ 5ಭರವಸೆಗಳ ಪೈಕಿ 4 ಘೋಷಣೆಗಳನ್ನು ಈಗಾಗಲೇ ಈಡೆರಿಸಿದೆ. ಡಿಸೆಂಬರ್ ಅಥವಾ ಜನವರಿಯಲ್ಲಿ 5ನೇ ಗ್ಯಾರಂಟಿಯಾದ ಯುವನಿಧಿ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದರು.
ಜಿಲ್ಲೆಯ 3,39,305 ಗೃಹಲಕ್ಷ್ಮೀ ಲಾನುಭವಿಗಳಿದ್ದು, ಈ ಪೈಕಿ ಶೇ. 86 ಲಾನುಭವಿಗಳು ಯೋಜನೆಗೆ ನೋಂದಾಯಿಸಿಕೊಂಡಿದ್ದಾರೆ. 5 ವರ್ಷಗಳ ಕಾಲ ಭ್ರಷ್ಟಾಚಾರ ರಹಿತ, ಅಭಿವೃದ್ಧಿ ಪರ ಆಡಳಿತ ನೀಡುತ್ತೆವೆ ಎಂದರು.
ಹೆಬ್ಬಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ನಿಂಗಪ್ಪ ಮೊರಬ ಅಧ್ಯಕ್ಷತೆ ವಹಿಸಿದ್ದರು.
ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಲ್ಲಾ ಪಂಚಾಯಿತಿ ಸಿಇಒ ಸ್ವರೂಪಾ ಟಿ.ಕೆ., ತಹಸೀಲ್ದಾರ್ ದೊಡ್ಡಪ್ಪ ಹೂಗಾರ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಸುಶೀಲವ್ವ ಸಾಲಿ ಹಾಗೂ ಸದಸ್ಯರು, ಯೋಜನೆಯ ಲಾನುಭವಿಗಳು ಮತ್ತು ಅಧಿಕಾರಿಗಳು ಇದ್ದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಪದ್ಮಾವತಿ ಜಿ. ಪ್ರಾಸ್ತಾವಿಕವಾಗಿ ಮಾತನಾಡಿದರು. ಯೋಜನೆ ಲಾನುಭವಿಗಳಾದ ಸುಜಾತಾ ಬೆಟಗೇರಿ, ರೇಖಾ ನಾಯ್ಕರ ಅನಿಸಿಕೆ ಹಂಚಿಕೊಂಡರು.
ರಾಜ್ಯ ಮಟ್ಟದ ಕಾರ್ಯಕ್ರಮವನ್ನು ಎಲ್‌ಇಡಿ ಪರದೆ ಮೂಲಕ ವೀಕ್ಷಣೆಗೆ ವ್ಯವಸ್ಥೆ ಕಲ್ಪಿಸಲಾಗಿತ್ತು.