ಬಾಗಲಕೋಟೆ: ( heart attack ) ವಧುವಿಗೆ ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ವರ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಈ ಘಟನೆ ಬಾಗಲಕೋಟೆ ಜಿಲ್ಲೆ ಜಮಖಂಡಿಯಲ್ಲಿ ನಡೆದಿದೆ.
ಪ್ರವೀಣ ಕುರಣಿ ಎಂಬಾತನೇ ಮೃತ ದುರ್ದೈವಿ. ಪ್ರವೀಣ ರಾಜ್ಯ ಸೈಕ್ಲಿಂಗ್ ಸಂಘದ ಕಾರ್ಯದರ್ಶಿ ಶ್ರೀಶೈಲ ಕುರಣಿ ಅವರ ಪುತ್ರ. ವಧುವಿಗೆ ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ವರ ಹೃದಯಾಘಾತದಿಂದ ಮೃತಪಟ್ಟಿದ್ದಾನೆ.
ಮೂಲತಃ ಕುಂಬಾರಹಳ್ಳಿ ಗ್ರಾಮದ ಕುರಣಿ ಕುಟುಂಬ. ಇಂದು ಜಮಖಂಡಿ ನಗರದಲ್ಲಿ ಇರುವ ಮನೆಯಲ್ಲಿ ದೈವದ ಅಕ್ಕಿಕಾಳು ಕಾರ್ಯ ನಡೆದಿತ್ತು. ಬಳಿಕ ನಂದೀಶ್ವರ ಕಲ್ಯಾಣ ಮಂಟಪದಲ್ಲಿ ಆರತಕ್ಷತೆ ಇಟ್ಟುಕೊಂಡಿದ್ದರು. ಕಲ್ಯಾಣಮಂಟಪಕ್ಕೆ ಆಗಮಿಸಿದ ನವ ದಂಪತಿಗೆ ಬಂಧು-ಮಿತ್ರರು ಆರತಕ್ಷತೆ ಹಾಕಿ ಆಶೀರ್ವದಿಸುವ ಗಳಿಗೆಯಲ್ಲೆ ಯಾರೂ ಊಹಿಸದ ಈ ದುರ್ಘಟನೆ ನಡೆದಿದೆ.
ದಿಢೀರ ಹೃದಯಾಘಾತದಿಂದ ವರ ಸಾವನ್ನಪ್ಪಿದ್ದಾನೆ. ಈ ಘಟನೆಯಿಂದ ಕೆಲವೇ ಕ್ಷಣದಲ್ಲಿ ಅಲ್ಲಿ ಸೂತಕದ ಛಾಯೆ ಆವರಿಸಿದೆ.