ಹುಣಸೂರು: ತಾಲೂಕಿನ ಬಿಳಿಕೆರೆ ಹೋಬಳಿ ವ್ಯಾಪ್ತಿಯಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಜಿ.ಡಿ.ಹರೀಶ್‌ಗೌಡ ಫೆ.6ರಂದು ಭೂಮಿಪೂಜೆ ನೆರವೇರಿಸಲಿದ್ದಾರೆ ಎಂದು ಜೆಡಿಎಸ್ ಯುವಘಟಕದ ಮಾಜಿ ಅಧ್ಯಕ್ಷ ಹೊಸರಾಮನಹಳ್ಳಿ ಲೋಕೇಶ್ ತಿಳಿಸಿದರು.
ಹೊಸರಾಮನಹಳ್ಳಿ ತೆಂಕಲಕೊಪ್ಪಲು ರಸ್ತೆ ಅಭಿವೃದ್ಧಿಗಾಗಿ 10 ಕೋಟಿ ರೂ. ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಿದ್ದಾರೆ. ಹುಸೇನ್‌ಪುರ, ಶಿರಿಯೂರು ಮತ್ತು ರಾಯನಹಳ್ಳಿ ನಾಲಾ ಅಭಿವೃದ್ಧಿಯನ್ನು 3 ಕೋಟಿ ರೂ.(ತಲಾ 1 ಕೋಟಿ ರೂ.ಗಳು) ವೆಚ್ಚದಲ್ಲಿ ಕೈಗೊಳ್ಳಲಿದ್ದು ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಿದ್ದಾರೆ. ಆಯರಹಳ್ಳಿ ಮತ್ತು ತೆಂಕಲಕೊಪ್ಪಲು ಗ್ರಾಮದಲ್ಲಿ ಅಂಗನವಾಡಿ ಕಟ್ಟಡ, ಕಾಮಗಾರಿಗೆ ಶಂಕುಸ್ಥಾಪನೆ, ಟಿಎಸ್‌ಪಿ ಯೋಜನೆಯಡಿ 50 ಲಕ್ಷ ರೂ.ವೆಚ್ಚದಡಿ ತೆಂಕಲಕೊಪ್ಪಲು ಮತ್ತು ಕೊಮ್ಮೇಗೌಡನಕೊಪ್ಪಲು ಗ್ರಾಮಗಳಲ್ಲಿ ಮಾರಾಟಮಳಿಗೆಗಳ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ. ತೆಂಕಲಕೊಪ್ಪಲು ಗ್ರಾಮದ ಗುರುಮಠ ಆವರಣದಲ್ಲಿ ಕಾರ್ಯಕರಮ ನಡೆಯಲಿದೆ ಎಂದು ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಹುಟ್ಟುಹಬ್ಬ ಆಚರಣೆ: ಟಿಎಪಿಸಿಎಂಎಸ್ ಮಾಜಿ ಅಧ್ಯಕ್ಷ ಬಸವಲಿಂಗಯ್ಯ ಮಾತನಾಡಿ, ಶಾಸಕ ಹರೀಶ್‌ಗೌಡ ಅವರ ಹುಟ್ಟುಹಬ್ಬದ ಅಂಗವಾಗಿ ತೆಂಕಲಕೊಪ್ಪಲು ಗ್ರಾಮದ ಗುರುಮಠ ಆವರಣದಲ್ಲಿ ಆರೋಗ್ಯ ಉಚಿತ ತಪಾಸಣೆ, ರಕ್ತದಾನ ಶಿಬಿರ, ಹಾಲು ಉತ್ಪಾದಕರ ಸಹಕಾರ ಸಂಘದ ಸದಸ್ಯರೊಂದಿಗೆ ಹೈನುಗಾರಿಕೆ ನಿರ್ವಹಣೆ ಕುರಿತು ವಿಚಾರಗೋಷ್ಠಿ ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು. ಮುಖಂಡರಾದ ಅಸ್ವಾಳ್ ಕೆಂಪೇಗೌಡ, ಸಿರಾಜ್ ಇತರರು ಇದ್ದರು.