ಜಿಲ್ಲೆ

ದಕ್ಷಿಣ ಕನ್ನಡ ಜಿಲ್ಲೆಯ 296 ಕೇಂದ್ರಗಳಲ್ಲಿ ಗೃಹ ಲಕ್ಷ್ಮಿ ಯೋಜನೆಗೆ ಚಾಲನೆ

Mangaluru - Prakash MC Manjeshwar

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ 296 ಕೇಂದ್ರಗಳಲ್ಲಿ ರಾಜ್ಯದ ಅರ್ಹ ಎಲ್ಲ ಕುಟುಂಬಗಳ ಯಜಮಾನಿ ಮಹಿಳೆ ಬ್ಯಾಂಕ್ ಖಾತೆಗೆ ಮಾಸಿಕ 2000 ರೂ ಜಮಾ ಮಾಡುವ ಗೃಹಲಕ್ಷ್ಮಿ ಯೋಜನೆಗೆ ಬುಧವಾರ ಚಾಲನೆ ದೊರೆಯಿತು.

ಜಿಲ್ಲಾಡಳಿತ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ಮಂಗಳೂರು ಕುದ್ಮುಲ್ ರಂಗರಾವ್ ಪುರಭವನದಲ್ಲಿ ಗೃಹಲಕ್ಷ್ಮಿ ಯೋಜನೆ ಅನುಷ್ಠಾನಕ್ಕೆ ವಿಧಾನ ಪರಿಷತ್ ಶಾಸಕ ಡಾ. ಮಂಜುನಾಥ್ ಭಂಡಾರಿ ಅವರು ಚಾಲನೆ ನೀಡಿದರು.

ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ., ಮಹಿಳಾ ಮತ್ತು ‌ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಪಾಪಭೋವಿ, ಡಿಯುಡಿಸಿ ಯೋಜನಾ ನಿರ್ದೇಶಕ ಅಭಿಷೇಕ್, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಆನಂದ್ ಹಾಗೂ ಇತರೆ ಗಣ್ಯರು ವೇದಿಕೆಯಲ್ಲಿದ್ದರು.
ನಂತರ ಮೈಸೂರಿನಿಂದ ನೇರ ಪ್ರಸಾರವಾಗುತ್ತಿದ್ದ ಗೃಹ ಲಕ್ಷ್ಮೀ ಯೋಜನೆಯ ಚಾಲನೆ ಕಾರ್ಯಕ್ರಮವನ್ನು ವೀಕ್ಷಿಸಿದರು.
ನೂರಾರು ಸಂಖ್ಯೆಯ ಫಲಾನುಭವಿಗಳು ಹಾಗೂ ಸಾರ್ವನಿಕರು ಭಾಗವಹಿಸಿದ್ದರು.

*ಲಕ್ಷ್ಮೀಯರ ದಂಡು ಹರಿದು ಬಂದಿತ್ತು

ನಗರದ ಟೌನ್‍ಹಾಲ್‍ನಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಸಾವಿರಾರು ಗೃಹ ಲಕ್ಷ್ಮೀಯರ ದಂಡೇ ಹರಿದು ಬಂತು. ಪುರಭವನದ ಸುತ್ತ ಮುತ್ತ ಹಬ್ಬದ ವಾತಾವರಣ ಮನೆ ಮಾಡಿತ್ತು. ಪ್ರವೇಶ ದ್ವಾರದಲ್ಲಿ ರಂಗೋಲಿಯ ರಂಗು, ಸಬಾಂಗಣ ಅಲಂಕೃತಗೊಂಡಿತ್ತು.