ಉಡುಪಿ: ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯು ವಿತರಿಸುವ ಅಂತ್ಯೋದಯ, ಬಿ.ಪಿ.ಎಲ್ ಮತ್ತು ಎ.ಪಿ.ಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಯು ಗೃಹಲಕ್ಷ್ಮಿ ಯೋಜನೆಯ ಅರ್ಹ ಫಲಾನುಭವಿಯಾಗಿದ್ದು, ಜಿಲ್ಲೆಯಲ್ಲಿ 2,56,850 ಪಡಿತರ ಚೀಟಿಗಳಲ್ಲಿ 2,08,695 ಫಲಾನುಭವಿಗಳು ಈ ಯೋಜನೆಗೆ ನೋಂದಾಯಿಸಿದ್ದಾರೆ. ಮುಂದಿನ 3 ದಿನಗಳಲ್ಲಿ ಎಲ್ಲಾ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆಯಾಗಲಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದರು.
ಜಿಲ್ಲಾಡಳಿತ ನಗರದ ಕಿನ್ನಿಮುಲ್ಕಿ ಮಿಷನ್ ಕಂಪೌಂಡ್ನ ಬಾಸೆಲ್ ಮಿಷನರಿಸ್ ಮೆಮೋರಿಯಲ್ ಆಡಿಟೋರಿಯಂನಲ್ಲಿ ಗೃಹಲಕ್ಷ್ಮಿ ಯೋಜನೆ ಅನುಷ್ಠ್ಠಾನ ಸಮಾರಂಭದ ನೇರ ಪ್ರಸಾರ ಹಾಗೂ ಸಮಾವೇಶದಲ್ಲಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ 155 ಗ್ರಾಮ ಪಂಚಾಯಿತಿ ಕೇಂದ್ರ ಸ್ಥಾನದಲ್ಲಿ ಹಾಗೂ ನಗರ ಸ್ಥಳಿಯ ಸಂಸ್ಥೆಯ 52 ವಾರ್ಡ್ಗಳಲ್ಲಿ ಹಾಗೂ 6 ತಾಲೂಕು ಕೇಂದ್ರಗಳಲ್ಲಿ ಮತ್ತು 1 ಜಿಲ್ಲಾ ಕೇಂದ್ರದಲ್ಲಿ ಸೇರಿದಂತೆ ಒಟ್ಟು 214 ಸ್ಥಳಗಳಲ್ಲಿ ಏಕ ಕಾಲದಲ್ಲಿ ಉದ್ಘಾಟನಾ ಕಾರ್ಯಕ್ರಮದ ನೇರ ಪ್ರಸಾರ ಆಯೋಜಿಸಲಾಗಿದೆ ಎಂದು ತಿಳಿಸಿದರು.
ಶಾಸಕ ಯಶ್ಪಾಲ್ . ಸುವರ್ಣ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ, ನಗರಸಭಾ ಸದಸ್ಯರಾದ ರಮೇಶ್ ಕಾಂಚನ್, ಅಮೃತಾಕೃಷ್ಣ್ಣಮೂರ್ತಿ, ಕೃಷ್ಣರಾವ್ ಕೊಡಂಚ, ವಿಜಯ ಪೂಜಾರಿ, ಮುಖಂಡರಾದ ಮುನಿಯಾಲು ಉದಯ್ ಕುಮಾರ್ ಶೆಟ್ಟಿ, ಪ್ರಸಾದ್ ಕಾಂಚನ್, ಕೃಷ್ಣಮೂರ್ತಿ, ದಿನಕರ್ ಹೆರೂರು ಉಪಸ್ಥಿತರಿದ್ದರು.