ಮೈಸೂರು: ಜೆಡಿಎಸ್ಗೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿಗಿಂತಲೂ ಮೈಸೂರಿನಲ್ಲಿ ದೊಡ್ಡ ಹೈಕಮಾಂಡ್ ಇದೆ ಎಂದು ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ.
ಪಕ್ಷ ವಿರೋಧಿ ಚಟುವಟಿಕೆ ಮಾಡಿದವರನ್ನು ಜೆಡಿಎಸ್‌ನಿಂದ ಉಚ್ಛಾಟನೆ ಮಾಡುವ ಕುರಿತು ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಜಿ.ಟಿ.ದೇವೇಗೌಡ, ಕುಮಾರಸ್ವಾಮಿ ಮಾತ್ರ ಉಚ್ಛಾಟನೆ ಪದ ಬಳಸಿಲ್ಲ. ಮೈಸೂರಿನ ಹೈಕಮಾಂಡ್ ಕೂಡ ಮೈಸೂರಿನಿಂದಲೇ ಉಚ್ಛಾಟನೆ ಪ್ರಕ್ರಿಯೆ ಶುರುವಾಗುತ್ತೆ ಅಂತ ಹೇಳಿದ್ದಾರೆ. ಕುಮಾರಸ್ವಾಮಿಗಿಂತಲೂ ಮೈಸೂರಿನಲ್ಲಿ ದೊಡ್ಡ ಹೈಕಮಾಂಡ್ ಇದೆ ಎಂದು ಶಾಸಕ ಸಾ.ರಾ.ಮಹೇಶ್ ವಿರುದ್ಧ ವಾಗ್ದಾಳಿ ನಡೆಸಿದರು. ಇದನ್ನೂ ಓದಿರಿ ನಿನ್ ಹೆಂಡ್ತಿಗೆ ಸೀರೆ ತರಲು ಹೋಗಿದ್ಯಾ? ರಾಸ್ಕಲ್…: ಅಧಿಕಾರಿಗಳ ವಿರುದ್ಧ ನಾಲಿಗೆ ಹರಿಯಬಿಟ್ಟ ಮಾಧುಸ್ವಾಮಿ
ನಾನು ಯಾವುದೇ ಹಂತದಲ್ಲೂ ಪಕ್ಷ ವಿರೋಧಿ ಚಟುವಟಿಕೆ ಮಾಡಿಲ್ಲ. ಮೈಸೂರಿನಲ್ಲಿ ಕೆಲವರು ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಲು ಜೆಡಿಎಸ್‌ನಿಂದ ವೀಕ್ ಕ್ಯಾಂಡೇಟ್ ಹಾಕಿಸಿಕೊಂಡಿದ್ದಾರೆ. ಆ ಮೂಲಕ ಬೇರೆ ಪಕ್ಷಗಳಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ. ಒಂದು ವೇಳೆ ಉಚ್ಛಾಟನೆ ಮಾಡುವುದಾದರೆ ಅವರನ್ನು ಮಾಡಬೇಕು ಎಂದು ಮಾತಿನಲ್ಲೇ ತಿವಿದರು.
ದೇವೇಗೌಡರಿಗೆ ಎಲ್ಲವೂ ಗೊತ್ತು. ಪ್ರತಿಯೊಬ್ಬ ಶಾಸಕ, ನಾಯಕರೂ ಏನೇನು ಮಾಡುತ್ತಿದ್ದಾರೆ ಅನ್ನುವುದರ ಇಂಚಿಂಚೂ ಮಾಹಿತಿ ಅವರಿಗೆ ಗೊತ್ತಿದೆ ಎಂದರು.