ವಿಜಯವಾಣಿ ಸುದ್ದಿಜಾಲ ಧಾರವಾಡ
ಗೃಹಲಕ್ಷ್ಮೀ ಯೋಜನೆಯಡಿ ಅರ್ಜಿ ಸಲ್ಲಿಸಿದವರಿಗೆ ಹಣ ಬರುತ್ತಿವೆ. ಬಾಕಿ ಇರುವ 95 ಜನರಿಗೆ ತಾಂತ್ರಿಕ ಸಮಸ್ಯೆಗಳನ್ನು ಸರಿಪಡಿಸಬೇಕು. ಅನ್ನಭಾಗ್ಯ ಯೋಜನೆಯಡಿ ವಿತರಣೆಯಾಗುವ ಪಡಿತರದ ದುರುಪಯೋಗ ಆಗದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು ಎಂದು ಗ್ಯಾರಂಟಿ ಅನುಷ್ಠಾನ ಸಮಿತಿಯ ಗೀತಾ ತಾವಂಶಿ ಹೇಳಿದರು.
ನಗರದ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಹು-ಧಾ ಪಶ್ಚಿಮ ಕ್ಷೇತ್ರದ ಗ್ಯಾರಂಟಿ ಅನುಷ್ಠಾನ ಸಮಿತಿಯ ಸಭೆಯಲ್ಲಿ ಅವರು ಮಾತನಾಡಿದರು.
ಸಭೆಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಕುರಿತು ಇಲಾಖಾವಾರು ಅಽಕಾರಿಗಳು ವಿವರಿಸಿದರು. ಬಸವರಾಜ ತೇರದಾಳ, ಸಿದ್ದೇಶ್ವರ ಕಾರದಕಟ್ಟಿ, ಇರ್ಷಾದ್, ಗೌಸ್ ನವಲೂರ, ಭರಮಪ್ಪ ಬಂಗಾರಿ, ರಾಜು ಚಲವಾದಿ, ತ್ರಿಶಲಾ ಜೈನ್, ಸುನಂದಾ ಕೋಲಕರ ಹಾಗೂ ಮಹಾನಗರ ಪಾಲಿಕೆಯ ಅಧಿಕಾರಿಗಳಿದ್ದರು.